ಟಿಪ್ಪು ಜಯಂತಿ ರದ್ದು ಸ್ವಾಗತಾರ್ಹ: ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಝೀಮ್

Update: 2019-10-30 14:12 GMT

ಕಲಬುರಗಿ, ಅ.30: ಟಿಪ್ಪು ಸುಲ್ತಾನ್ ಜಯಂತಿಯನ್ನು ರದ್ದು ಮಾಡಿರುವ ರಾಜ್ಯ ಸರಕಾರದ ನಿರ್ಧಾರ ಸ್ವಾಗತಾರ್ಹ. ಇಸ್ಲಾಮ್ ಧರ್ಮದಲ್ಲಿ ವ್ಯಕ್ತಿ ಪೂಜೆಗೆ ಅವಕಾಶವಿಲ್ಲ ಎಂದು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಝೀಮ್ ತಿಳಿಸಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ತಮ್ಮ ಆಡಳಿತಾವಧಿಯಲ್ಲಿ ಯಾರ ಮಾತನ್ನು ಕೇಳಿ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಮಾಡುವ ನಿರ್ಧಾರ ಕೈಗೊಂಡರೋ ಗೊತ್ತಿಲ್ಲ. ಮತಗಳಿಗಾಗಿ ಅವರು ಟಿಪ್ಪು ಸುಲ್ತಾನ್ ಜಯಂತಿ ಆರಂಭಿಸಿರಬಹುದು ಎಂದು ಟೀಕಿಸಿದರು.

ಟಿಪ್ಪು ಜಯಂತಿ ರದ್ದು ಮಾಡುವ ಮೂಲಕ ಸರಕಾರ ಒಳ್ಳೆಯ ಕೆಲಸ ಮಾಡಿದೆ. ಆದರೆ, ಇತಿಹಾಸ ಪಠ್ಯಪುಸ್ತಕದಿಂದ ಟಿಪ್ಪು ಸುಲ್ತಾನ್ ಪಠ್ಯವನ್ನು ಕೈ ಬಿಡುವುದು ಸರಿಯಲ್ಲ. ಈ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಜೊತೆ ಮಾತನಾಡುತ್ತೇನೆ ಎಂದು ಅಬ್ದುಲ್ ಅಝೀಮ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News