ಟಿಪ್ಪು ಜಯಂತಿ ರದ್ದು ಪ್ರಶ್ನಿಸಿ ಅರ್ಜಿ: ಆಕ್ಷೇಪಣೆ ಸಲ್ಲಿಸಲು ಸಮಯಾವಕಾಶ ಕೋರಿದ ಸರಕಾರ

Update: 2019-10-30 14:13 GMT

ಬೆಂಗಳೂರು, ಅ.30: ಟಿಪ್ಪುಸುಲ್ತಾನ್ ಜಯಂತಿಯನ್ನು ರಾಜ್ಯ ಬಿಜೆಪಿ ಸರಕಾರ ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ಹೈಕೋರ್ಟ್ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ. 

ಈ ಕುರಿತು ಉತ್ತರಪ್ರದೇಶದ ಲಖನೌ ನಿವಾಸಿ ಬಿಲಾಲ್ ಅಲಿ ಶಾ, ಟಿಪ್ಪು ರಾಷ್ಟ್ರೀಯ ಸೇವಾ ಸಂಘ, ಟಿಪ್ಪು ಸುಲ್ತಾನ್ ಯುನೈಟೆಡ್ ಫ್ರಂಟ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಟಿಪ್ಪು ಸುಲ್ತಾನ್ ಜಯಂತಿಯನ್ನು ರದ್ದುಗೊಳಿಸಿ ಹೊರಡಿಸಿರುವ ಅಧಿಸೂಚನೆ ಪ್ರಶ್ನಿಸಿದ್ದಾರೆ. ಅಲ್ಲದೆ, ಸಂವಿಧಾನದ ಅನುಚ್ಚೇದ 14 ಮತ್ತು 15ಕ್ಕೆ ವಿರುದ್ಧವಾಗಿದೆ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News