ಹೆಜಮಾಡಿ: ಅ.31ರಂದು ಏಕತೆಗಾಗಿ ಓಟ
Update: 2019-10-30 23:08 IST
ಉಡುಪಿ, ಅ.30: ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಕಾಪು ಮಂಡಲದ ಸಹಯೋಗದಲ್ಲಿ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲರ ಜನ್ಮ ದಿನಾಚರಣೆ ಪ್ರಯುಕ್ತ ನಾಳೆ ಅ.31ರಂದು ಬೆಳಗ್ಗೆ 8:00 ಗಂಟೆಗೆ ಹೆಜಮಾಡಿ ಗಡಿಭಾಗದಿಂದ ಹೆಜಮಾಡಿ ಪೇಟೆಯವರೆಗೆ ‘ಏಕತಾ ಓಟ’ ನಡೆಯಲಿದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ‘ಏಕತಾ ಓಟ’ಕ್ಕೆ ಚಾಲನೆ ನೀಡಲಿದ್ದಾರೆ. ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಕಾಪು ಮಂಡಲ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಶಾಸಕರಾದ ವಿ.ಸುನಿಲ್ ಕುಮಾರ್, ರಘುಪತಿ ಭಟ್, ಲಾಲಾಜಿ ಮೆಂಡನ್, ಜಿಪಂ ಅಧ್ಯಕ್ಷ ದಿನಕರ ಬಾಬು, ತಾಪಂ ಅಧ್ಯಕ್ಷೆ ನೀತಾ ಗುರುರಾಜ್ ಹಾಗೂ ಇತರರು ಅದರಲ್ಲಿ ಭಾಗವಹಿಸ ಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಪ್ರಕಟಣೆ ತಿಳಿಸಿದೆ.