ಕ್ಯಾಂಟರ್ ಢಿಕ್ಕಿ: ಇಬ್ಬರು ಬೈಕ್‍ ಸವಾರರು ಸಾವು

Update: 2019-10-30 18:42 GMT

ಶಿವಮೊಗ್ಗ, ಅ. 30: ಕ್ಯಾಂಟರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ, ಬೈಕ್ ಸವಾರ ಹಾಗೂ ಹಿಂಬದಿ ಸವಾರ ಮೃತಪಟ್ಟಿರುವ ಘಟನೆ ಶಿವಮೊಗ್ಗ ತಾಲೂಕಿನ ಆಯನೂರಿನಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.

ಬೈಕ್ ಸವಾರ, ಮರಗೆಲಸ ವೃತ್ತಿ ಮಾಡುತ್ತಿದ್ದ ಕೇಶವ (22) ಹಾಗೂ ಹಿಂಬದಿ ಸವಾರ ಗಿರೀಶ್ (14) ಮೃತಪಟ್ಟವರೆಂದು ಗುರುತಿಸಲಾಗಿದೆ. ಇವರಿಬ್ಬರು ಹಾರನಹಳ್ಳಿ ಗ್ರಾಮದ ನಿವಾಸಿಗಳಾಗಿದ್ದಾರೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದವರನ್ನು ಆಯನೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆತರುವ ಮಾರ್ಗಮಧ್ಯೆ ಅಸುನೀಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿಯಿತ್ತು ಪರಿಶೀಲಿಸಿದರು. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News