ಹಾಸನ: ಆರ್ ಸಿಇಪಿ ಒಪ್ಪಂದಕ್ಕೆ ಸಹಿ ಹಾಕದಂತೆ ಆಗ್ರಹಿಸಿ ರೈತ ಸಂಘದಿಂದ ಅರೆಬೆತ್ತಲೆ ಮೆರವಣಿಗೆ

Update: 2019-10-31 11:34 GMT

ಹಾಸನ, ಅ,31: ಪ್ರಾದೇಶಿಕ ಸಮಗ್ರ ಸಹಭಾಗಿತ್ವ (ಆರ್.ಸಿ.ಇ.ಪಿ.) ಮುಕ್ತ ವ್ಯಾಪಾರ ಒಪ್ಪಂದಕ್ಕೆ ಕೇಂದ್ರ ಸರಕಾರ ಸಹಿ ಹಾಕಬಾರದೆಂದು ಆಗ್ರಹಿಸಿ ರಾಜ್ಯ ರೈತ ಸಂಘ ಜಿಲ್ಲಾ ಘಟಕದಿಂದ ಅರೆಬೆತ್ತಲೆ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಆರ್.ಗಿರೀಶ್‍ರವರಿಗೆ ಮನವಿ ಸಲ್ಲಿಸಲಾಯಿತು.

ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟ ಅರೆಬೆತ್ತಲೆ ಪ್ರತಿಭಟನಾ ಮೆರವಣಿಗೆಯು ಎನ್.ಆರ್ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಸಾಗಿತು. ಕೇಂದ್ರ ಸರಕಾರವು ಪ್ರಾದೇಶಿಕ ಸಮಗ್ರ ಆರ್ಥಿಕ ಸಹಬಾಗಿತ್ವ(ಆರ್.ಸಿ.ಇ.ಪಿ.) ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಳ್ಳಲು ನವೆಂಬರ್ ವೇಳೆಗೆ ಮಾತುಕತೆ ಮುಕ್ತಾಯಗೊಳಿಸಿ ಸಹಿ ಹಾಕಲಿದೆ. ಇದರಿಂದ ನಮ್ಮ ಆಹಾರ ಮತ್ತು ಕೃಷಿ ಕ್ಷೇತ್ರವು ನಷ್ಟಕ್ಕೆ ಗುರಿಯಾಗುತ್ತದೆ ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು.

ಬಳಿಕ ಪ್ರತಿಭಟನಾಕಾರರು ಕೇಂದ್ರ ಸರಕಾರವು ಆರ್ ಸಿಇಪಿ ಒಪ್ಪಂದಕ್ಕೆ ಸಹಿ ಹಾಕಬಾರದು ಎಂದು ತಮ್ಮ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದರು.

ಅರೆಬೆತ್ತಲೆ ಮೆರವಣಿಗೆಯಲ್ಲಿ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಆನೆಕರೆ ರವಿ, ಜಿಲ್ಲಾಧ್ಯಕ್ಷ ಬಾಬು, ಕಾರ್ಯದರ್ಶಿ ಲತಾ, ಜಿಲ್ಲಾ ಉಪಾಧ್ಯಕ್ಷ ಮೀಸೆ ಮಂಜಣ್ಣ, ಮುಖಂಡ ಮಹಮದ್ ಸಾದಿಕ್, ಅಂಗಡಿ ರಾಜಣ್ಣ ಇತರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News