ಭಾರೀ ಮಳೆ: ನ.1ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಾಲಾ–ಕಾಲೇಜುಗಳಿಗೆ ರಜೆ

Update: 2019-10-31 15:21 GMT

ಕಾಸರಗೋಡು: ಜಿಲ್ಲೆಯಲ್ಲಿ ಸುರಿಯುತ್ತಿರುವ ಗಾಳಿ ಮಳೆ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲೆಯ ಎಲ್ಲಾ ಶಾಲಾ -ಕಾಲೇಜುಗಳಿಗೆ ನ.1ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ  ಡಿ. ಸಜಿತ್ ಬಾಬು ಆದೇಶ ನೀಡಿದ್ದಾರೆ. ಅಂಗನವಾಡಿಗಳಿಗೂ ರಜೆ ಅನ್ವಯವಾಗಲಿದೆ. 

ಪೂರ್ವ ನಿಗದಿತ ಪರೀಕ್ಷೆಗಳು ನಡೆಯಲಿದೆ. ಮುಂದಿನ 48ಗಂಟೆಗಳ ಕಾಲ ಭಾರೀ ಗಾಳಿ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಮುಂಜಾಗ್ರತೆ ವಹಿಸುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News