ಟಿಪ್ಪು ಕಾಲದಲ್ಲಿ ಸಿದ್ದರಾಮಯ್ಯ ಇದ್ದಿದ್ದರೆ ಮತಾಂತರವಾಗುತ್ತಿದ್ದರು: ಸಚಿವ ಆರ್.ಅಶೋಕ್

Update: 2019-10-31 15:25 GMT

ಬೆಂಗಳೂರು, ಅ.31: ಟಿಪ್ಪುಸುಲ್ತಾನ್ ಕಾಲದಲ್ಲಿ ಸಿದ್ದರಾಮಯ್ಯ ಇದ್ದಿದ್ದರೆ ಮತಾಂತರಗೊಂಡು ಅಬ್ದುಲ್ ಸಿದ್ದರಾಮಯ್ಯ ಆಗುತ್ತಿದ್ದರು ಎಂದು ಕಂದಾಯ ಸಚಿವ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಪ್ಪು ಕಾಲದಲ್ಲಿ ಕೊಡಗಿನಲ್ಲಿ 1 ಲಕ್ಷ ಜನ ಮತಾಂತರ ಆಗಿದ್ದಾರೆ. ಹಾಗೆಯೇ ಮೇಲುಕೋಟೆಯಲ್ಲಿ ದೀಪಾವಳಿ ದಿನದಂದೇ ಹಿಂದೂಗಳನ್ನು ಹತ್ಯೆ ಮಾಡಿದ ಕಾರಣಕ್ಕಾಗಿ ಅಲ್ಲಿ ಈಗಲೂ ದೀಪಾವಳಿ ಆಚರಣೆ ಮಾಡಲ್ಲವೆಂದರು.

ಇತಿಹಾಸದಲ್ಲಿ ಬಂದುಹೋದ ಬಹಳಷ್ಟು ಮಹಾತ್ಮರ ವಿಷಯಗಳು ಪಠ್ಯದಲ್ಲಿ ಬಂದೇ ಇಲ್ಲ. ಬೇಡದಿರುವವರೇ ಪಠ್ಯದಲ್ಲಿ ಸೇರಿ ಹೋಗಿದ್ದಾರೆ. ಟಿಪ್ಪುಒಬ್ಬ ಮತಾಂಧ, ಆಕ್ರಮಣಕಾರಿಯಾಗಿದ್ದವನು ಹಾಗೂ ಹಿಂದೂ ದ್ವೇಷಿ. ಹೀಗಾಗಿ ಅವನ ಕುರಿತು ಪಠ್ಯ ಅಗತ್ಯವಿಲ್ಲ ಎಂದು ಸರಕಾರದ ನಡೆಯನ್ನು ಅವರು ಸಮರ್ಥಿಸಿಕೊಂಡರು.

ಟಿಪ್ಪುಪಠ್ಯ ಕುರಿತು ಸಮಿತಿ ರಚನೆ ಆಗಿದೆ. ಸಮಿತಿ ವರದಿ ಕೊಟ್ಟ ಬಳಿಕ ಶಿಕ್ಷಣ ಸಚಿವರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಪಠ್ಯದಲ್ಲಿ ಅಬ್ದುಲ್ ಕಲಾಂ, ಶಿಶುನಾಳ ಶರೀಫ್, ಗಡಿನಾಡ ಗಾಂಧಿ ಖಾನ್ ಅಬ್ದುಲ್ ಗಫಾರ್ ಖಾನ್ ನಂತವರು ಬೇಕು. ಟಿಪ್ಪುವಿನಂತಹ ಮತಾಂಧರ ಬಗ್ಗೆ ನಮ್ಮ ಮಕ್ಕಳು ಕಲಿಯುವ ಅಗತ್ಯವಿಲ್ಲ ಎಂದು ಅವರು ತಿಳಿಸಿದರು.

ಮೆಡಿಕಲ್ ಕಾಲೇಜು ಕುರಿತು ವಾದ-ವಿವಾದ ಆಗಬಾರದಿತ್ತು. ಪ್ರತೀ ಜಿಲ್ಲಾ ಕೇಂದ್ರಕ್ಕೆ ಮೆಡಿಕಲ್ ಕಾಲೇಜು ಕೊಡುವ ಘೋಷಣೆಯನ್ನು ಮಾಡಿದ್ದೆವು. ನಂತರ ತಾಲೂಕು, ಹೋಬಳಿ ಕೇಂದ್ರಕ್ಕೆ ಕೊಡಬೇಕೆಂದು ನಿರ್ಧರಿಸಲಾಗಿದೆ. ಹೀಗಾಗಿ ಕನಕಪುರಕ್ಕೆ ನಿರ್ಧಾರವಾಗಿದ್ದ ಮೆಡಿಕಲ್ ಕಾಲೇಜು ಬೇರೊಂದು ಜಿಲ್ಲೆಗೆ ಸೇರುವುದು ನ್ಯಾಯಯುತ.

-ಆರ್.ಅಶೋಕ್, ಕಂದಾಯ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News