×
Ad

ಡಿವೈಎಸ್‍ಪಿ ಗಣಪತಿ ಆತ್ಮಹತೈ ಪ್ರಕರಣ: ಸಿಬಿಐ ವರದಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ

Update: 2019-10-31 22:28 IST

ಮಡಿಕೇರಿ, ಅ.31: ಡಿವೈಎಸ್‍ಪಿ ಮಾದಪಂಡ ಗಣಪತಿ ಆತ್ಮಹತೈ ಪ್ರಕರಣದ ಕುರಿತು ಸಿಬಿಐ ಸಲ್ಲಿಸಿರುವ ತನಿಖಾ ವರದಿಗೆ ಸಂಬಂಧಿಸಿದಂತೆ ಪ್ರಕರಣವನ್ನು ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮಡಿಕೇರಿ ಜೆಎಂಎಫ್‍ಸಿ ನ್ಯಾಯಾಲಯ ವರ್ಗಾಯಿಸಿದೆ.

ಈ ಪ್ರಕರಣದಲ್ಲಿ ಅಂದು ಗೃಹ ಸಚಿವರಾಗಿದ್ದ ಕೆ.ಜೆ.ಜಾರ್ಜ್ ವಿರುದ್ಧ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಬೆಂಗಳೂರು ಸಿ.ಟಿ.ಕೋರ್ಟ್‍ನಲ್ಲಿರುವ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರದಿಯನ್ನು ವರ್ಗಾಯಿಸಲಾಗಿದೆ. ಮುಂದಿನ ವಿಚಾರಣೆಗಳು ಆ ಕೋರ್ಟ್‍ನಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ.

ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಡಿವೈಎಸ್‍ಪಿ ಗಣಪತಿ ಆತ್ಮಹತೈ ಪ್ರಕರಣದ ಕುರಿತು ಕಳೆದ 2 ವರ್ಷಗಳಿಂದ ಚೆನ್ನೈ ಸಿಬಿಐ ತನಿಖೆ ನಡೆಸಿದ್ದು, ಒಟ್ಟು 262 ಪುಟಗಳ ವರದಿಯನ್ನು ನಿನ್ನೆ ಮಡಿಕೇರಿ ಜೆಎಂಎಫ್‍ಸಿ ನ್ಯಾಯಾಲಯದ ನ್ಯಾಯಾಧೀಶರಾದ ಮನು ಅವರಿಗೆ ಸಲ್ಲಿಸಿತ್ತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News