ನ.2 ರಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಮೈಸೂರಿಗೆ

Update: 2019-10-31 17:23 GMT

ಮೈಸೂರು,ಅ.31: ನಗರದ ಜೆಎಸ್‍ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ ದಶಮ ವಾರ್ಷಿಕ ಘಟಿಕೋತ್ಸವ ಸಮಾರಂಭ ನ.2 ರಂದು ಬನ್ನಿಮಂಟಪದ ಜೆಎಸ್‍ಎಸ್ ವೈದ್ಯಕೀಯ ಕಾಲೇಜು ಆವರಣದಲ್ಲಿ ನಡೆಯಲಿದ್ದು, ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆಂದು ಪ್ರಭಾರ ಕುಲಪತಿ ಡಾ.ಎಚ್. ಬಸವನಗೌಡಪ್ಪ ತಿಳಿಸಿದರು.

ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಪಾಲ ವಜೂಭಾಯಿ ರೂಡಾಭಾಯಿ ವಾಲಾ ಹಾಗೂ ಸಚಿವ ವಿ.ಸೋಮಣ್ಣ ಮುಖ್ಯಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಹೇಳಿದರು.

ಈ ವೇಳೇ 1968 ವಿದ್ಯಾರ್ಥಿಗಳು ಸ್ನಾತಪೂರ್ವ, ಸ್ನಾತಕೋತ್ತರ ಮತ್ತು ಡಾಕ್ಟೊರೇಟ್ ಪದವಿಗಳನ್ನು ವೈದ್ಯಕೀಯ, ದಂತ ವೈದ್ಯಕೀಯ, ಔಷಧ ವಿಜ್ಞಾನ, ಆಡಳಿತ ನಿರ್ವಹಣೆ, ಜೀವ ವಿಜ್ಞಾನ ಮತ್ತು ಜೈವಿಕ ವಿಜ್ಞಾನ ನಿಕಾಯಗಳಲ್ಲಿ ಪಡೆಯಲಿದ್ದಾರೆ. ಅಲ್ಲದೆ, 43 ವಿದ್ಯಾರ್ಥಿಗಳಿಗೆ ಒಟ್ಟು 60 ಪದಕ ಮತ್ತು ಪ್ರಶಸ್ತಿಗಳನ್ನು ಅವರ ಶೈಕ್ಷಣಿಕ ಉತ್ಕೃಷ್ಟತೆಗಾಗಿ ನೀಡಲಿದ್ದು, 52 ವಿದ್ಯಾರ್ಥಿಗಳು ಪಿಎಚ್‍ಡಿ ಮತ್ತು ಆರು ವಿದ್ಯಾರ್ಥಿಗಳು ವೈದ್ಯಕೀಯ ಸೂಪರ್ ಸ್ಪೆಷಾಲಿಟಿ ಪದವಿ ಸ್ವೀಕರಿಸಲಿದ್ದಾರೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಡಾ. ಸುಧೀಂದ್ರ ಭಟ್, ಕುಶಾಲಪ್ಪ, ಡಾ. ಮಂಜುನಾಥ್, ಡಾ. ರವೀಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News