ಕನ್ನಡದಲ್ಲಿ ರಾಜ್ಯೋತ್ಸವ ಶುಭಾಶಯ ಕೋರಿದ ಪ್ರಧಾನಿ

Update: 2019-11-01 05:23 GMT

ಹೊಸದಿಲ್ಲಿ, ನ.1: ಕನ್ನಡ ರಾಜ್ಯೋತ್ಸವಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕನ್ನಡದಲ್ಲೇ ಶುಭಾಶಯ ಕೋರುವ ಮೂಲಕ ಗಮನಸೆಳೆದಿದ್ದಾರೆ. ‘‘ರಾಷ್ಟ್ರದ ಬೆಳವಣಿಗೆಗೆ ಕರ್ನಾಟಕ ನೀಡಿದ ಅತ್ಯುನ್ನತ ಕೊಡುಗೆಯನ್ನು ಆಚರಣೆ ಮಾಡುವ ದಿವಸವೇ ಕರ್ನಾಟಕ ರಾಜ್ಯೋತ್ಸವ. ಕನ್ನಡಿಗರ ವಿಶಾಲ ಹೃದಯವಂತಿಕೆ ಹಾಗೂ ಕನ್ನಡ ನಾಡಿನ ಸೌಂದರ್ಯ ಹೆಸರುವಾಸಿಯಾದದ್ದು. ಬರುವ ದಿನಗಳಲ್ಲಿ ಕರ್ನಾಟಕದ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ’’ ಎಂದು ಮೋದಿ ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News