ದಿಲ್ಲಿಯಲ್ಲಿ ಸಾರ್ವಜನಿಕ ಆರೋಗ್ಯ ತುರ್ತು ಸ್ಥಿತಿ ಘೋಷಣೆ

Update: 2019-11-01 08:35 GMT

ಹೊಸದಿಲ್ಲಿ, ನ.1: ವಾಯು ಗುಣಮಟ್ಟ ತೀವ್ರ ಹದಗೆಟ್ಟ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯು ದಿಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾರ್ವಜನಿಕ ಆರೋಗ್ಯ ತುರ್ತು ಸ್ಥಿತಿಯನ್ನು ಘೋಷಿಸಿದೆ.

ಗುರುವಾರ ರಾತ್ರಿ ಇಲ್ಲಿನ ಮಾಲಿನ್ಯ ಪ್ರಮಾಣವು ಅತಿ ಗಂಭೀರ ಮಟ್ಟಕ್ಕೆ ತಲುಪಿರುವ ಕಾರಣ ಮಾಲಿನ್ಯವನ್ನು ನಿಯಂತ್ರಿಸುವ ಉದ್ದೇಶದಿಂದ ನಿರ್ಮಾಣ ಚಟುವಟಿಕೆಗಳನ್ನು ನವೆಂಬರ್ 5ರವರೆಗೆ ಪರಿಸರ ಮಾಲಿನ್ಯ ಪ್ರಾಧಿಕಾರ ನಿಷೇಧಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News