ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯ ಉದ್ಘಾಟನೆ

Update: 2019-11-01 14:46 GMT

ಮಣಿಪಾಲ, ನ.1: ಮಣಿಪಾಲದ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯವನ್ನು ರಾಜ್ಯ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಶುಕ್ರವಾರ ಉದ್ಘಾಟಿಸಿದರು.

ಬಳಿಕ ಸಚಿವರು ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ದರು. ಈ ಸಂದರ್ಭದಲ್ಲಿ ಪರಿಶಿಷ್ಟ ಜಾತಿಯ ಮರಳು ಕಾರ್ಮಿಕರ ಮನವಿಗೆ ಸ್ಪಂದಿಸಿದ ಸಚಿವರು, ನಾನ್ ಸಿಆರ್‌ಝೆಡ್ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿಯ ಮರಳು ಕಾರ್ಮಿಕರಿಗೆ ಮರಳು ತೆರವುಗೊಳಿಸಲು ಅವಕಾಶ ನೀಡುವ ವಿಚಾರ ದಲ್ಲಿ ಬೆಂಗಳೂರಿನಲ್ಲಿ ನಡೆಯುವ ಸಭೆಯಲ್ಲಿ ಪ್ರಸ್ತಾಪಿಸಲಾಗುವುದು ಎಂದು ಭರವಸೆ ನೀಡಿದರು.

ಖಾಸಗಿ ಬಸ್‌ಗಳಿಗೆ ಸಂಬಂಧಿಸಿದ ಹೊಸ ನೀತಿಯ ಬಗ್ಗೆ ವರದಿಯನ್ನು ತರಿಸಿ ಅಧ್ಯಯನ ಮಾಡಿ ಮುಂದೆ ಖಾಸಗಿ ಬಸ್‌ಗಳಿಗೆ ತೊಂದರೆ ಆಗದ ರೀತಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದರು. ಈ ಬಾರಿ ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವದ ಸಂದರ್ಭ ಕನ್ನಡ ಧ್ವಜ ಹಾರಿಸದ ಕುರಿತ ಪ್ರತ್ರಿಯಿಸಿದ ಸಚಿವರು, ಮುಂದಿನ ವರ್ಷದಿಂದ ಕಡ್ಡಾಯವಾಗಿ ಕನ್ನಡ ಧ್ವಜ ಹಾರಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಶಾಸಕರಾದ ಕೆ.ರಘುಪತಿ ಭಟ್, ಸುನೀಲ್ ಕುಮಾರ್, ಜಿಲ್ಲಾಧಿಕಾರಿ ಜಗದೀಶ್, ಜಿಲ್ಲಾ ಪೊಲೀಸ್ ಅಧೀಕ್ಷಕಿ ನಿಶಾ ಜೇಮ್ಸ್, ಮಲ್ಪೆ ಕರಾವಳಿ ಕಾವಲು ಪಡೆಯ ಎಸ್ಪಿ ಚೇತನ್, ಜಿಪಂ ಅಧ್ಯಕ್ಷ ದಿನಕರ ಬಾಬು, ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News