ಕಾಂಗ್ರೆಸ್‌ಗೆ ಹುಸೈನ್ ಕಾಟಿಪಳ್ಳ ರಾಜೀನಾಮೆ
Update: 2019-11-01 21:22 IST
ಮಂಗಳೂರು, ನ.1: ಕಳೆದ 10 ವರ್ಷಗಳ ಕಾಲ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿದ್ದ, 1 ವರ್ಷ ಉಪಾಧ್ಯಕ್ಷ ರಾಗಿ ಸೇವೆ ಸಲ್ಲಿಸಿದ್ದ ಮತ್ತು ಪ್ರಸ್ತುತ ಕಾಟಿಪಳ್ಳ ವಾರ್ಡ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿದ್ದ ಹುಸೈನ್ ಕಾಟಿಪಳ್ಳ ಶುಕ್ರವಾರ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಮನಪಾ ಚುನಾವಣೆಯ ಸೀಟು ಹಂಚುವಿಕೆಯಲ್ಲಿ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿ ಅನನುಭವಿಗಳಿಗೆ ಅವಕಾಶ ನೀಡಲಾಗಿದೆ. ಈ ಅನ್ಯಾಯವನ್ನು ಪ್ರತಿಭಟಿಸಿ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಹುಸೈನ್ ಕಾಟಿಪಳ್ಳ ಪ್ರತಿಕ್ರಿಯಿಸಿದ್ದಾರೆ.