ಅಲ್ಪಸಂಖ್ಯಾತರ ಮಾಹಿತಿ ಕೇಂದ್ರದ ವಿಳಾಸ ಬದಲಾವಣೆ
Update: 2019-11-01 21:43 IST
ಉಡುಪಿ, ನ.1: ಈಗ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಕಚೇರಿ ಸ್ಥಳಾಂತರಗೊಂಡಿದ್ದು, ಇದರ ನೂತನ ವಿಳಾಸ ಕೆಳಗಿನಂತಿದೆ.
ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ನೆಲ ಮಹಡಿ, ವೌಲಾನಾ ಅಜಾದ್ ಭವನ, ಪಶುಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ-576104, ಉಡುಪಿ ಜಿಲ್ಲೆ, ದೂರವಾಣಿ ಸಂಖ್ಯೆ: 0820-2573596, ಇಮೈಲ್domuudpi@gmail.com : ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಕಚೇರಿಯ ದೂರವಾಣಿ ಸಂಖ್ಯೆ: 0820- 2574596, ಈಮೈಲ್:micudupi@gmail.com. ಮುಂದಿನ ಎಲ್ಲಾ ಪತ್ರ ವ್ಯವಹಾರಗಳಿಗೆ ನೂತನ ವಿಳಾಸವನ್ನು ಸಂಪರ್ಕಿಸುವಂತೆ ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.