ಕಲ್ಯಾಣ ಕರ್ನಾಟಕ ಭಾಗಕ್ಕೆ ಅನ್ಯಾಯ ಆರೋಪ: ಪ್ರತ್ಯೇಕ ಧ್ವಜಾರೋಹಣ ಯತ್ನ- ಬಂಧನ

Update: 2019-11-01 17:02 GMT
ಸಾಂದರ್ಭಿಕ ಚಿತ್ರ

ಕಲಬುರಗಿ, ನ.1: ರಾಜ್ಯ ಸರಕಾರದಿಂದ ಕಲ್ಯಾಣ ಕರ್ನಾಟಕ ಭಾಗಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನಿಸಿದ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಸದಸ್ಯರನ್ನು ಪೊಲೀಸರು ಬಂಧಿಸಿದರು.

ಶುಕ್ರವಾರ ನಗರದ ಜಿಲ್ಲಾ ನ್ಯಾಯಲಯ ಮುಂಭಾಗದ ರಸ್ತೆಯಿಂದ ಪಟೇಲ್ ವೃತ್ತದ ಮಾರ್ಗವಾಗಿ ಪ್ರತಿಭಟಿಸಿ, ಸಮಿತಿಯ ಅಧ್ಯಕ್ಷ ಎಂ.ಎಸ್.ಪಾಟೀಲ್ ನರಿಬೋಳ ನೇತೃತ್ವದಲ್ಲಿ ಹಲವು ಸದಸ್ಯರು ಪ್ರತ್ಯೇಕ ಧ್ವಜಾರೋಹಣಕ್ಕೆ ಮುಂದಾದ ವೇಳೆ ಪೊಲೀಸರು ಬಂಧಿಸಿ, ವಾಹನದಲ್ಲಿ ಕರೆದುಕೊಂಡು ಹೋದರು.

ಕಲ್ಯಾಣ ಕರ್ನಾಟಕ ಭಾಗಕ್ಕೆ ಸಾಮಾಜಿಕ, ಆರ್ಥಿಕ, ರಾಜಕೀಯ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ಅನ್ಯಾಯವಾಗುತ್ತಿದೆ. 371 ಜೆ ವಿದೇಯಕ ಜಾರಿಯಲ್ಲಿದ್ದರೂ ಸಮರ್ಪಕ ಜಾರಿಗೊಳಿಸದೆ ಅನ್ಯಾಯ ಮಾಡಲಾಗುತ್ತಿದೆ.

ರಾಜ್ಯ ಸರಕಾರಕ್ಕೆ ಈ ಭಾಗದ ಪ್ರಗತಿ ಬಗ್ಗೆ ಸಂಪೂರ್ಣ ನಿರ್ಲಕ್ಷವಿದ್ದು, ಕಲ್ಯಾಣ ಕರ್ನಾಟಕ ಭಾಗಕ್ಕೆ ಪ್ರತ್ಯೇಕ ರಾಜ್ಯ ನೀಡುವಂತೆ ಕಾರ್ಯಕರ್ತರು ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News