ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ ಆರೋಪ: ಶಿಕ್ಷಕನ ಬಂಧನ
Update: 2019-11-02 23:53 IST
ಶಿವಮೊಗ್ಗ, ನ.2: ವಿದ್ಯಾರ್ಥಿನಿಯ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇರೆಗೆ ಪೊಲೀಸರು ಶಿಕ್ಷಕನೋರ್ವನನ್ನು ಬಂಧಿಸಿದ ಘಟನೆ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ.
ವಿಜ್ಞಾನ ವಿಷಯ ಬೋಧಿಸುತ್ತಿದ್ದ ದೂದ್ಯನಾಯ್ಕ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯು ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಎನ್ನಲಾಗಿದ್ದು, ಈ ಕುರಿತಂತೆ ವಿದ್ಯಾರ್ಥಿನಿ ಪೋಷಕರ ಗಮನಕ್ಕೆ ವಿಷಯ ತಂದಿದ್ದು, ಪೋಷಕರು ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು.
ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.