ಫೋನ್ ಕದ್ದಾಲಿಕೆ ಪ್ರಕರಣ: 54 ಪೊಲೀಸ್ ಇನ್ಸ್‌ಪೆಕ್ಟರ್‌ಗಳಿಗೆ ನೋಟಿಸ್

Update: 2019-11-03 14:39 GMT

ಬೆಂಗಳೂರು, ನ.3: ಗಣ್ಯರ ಫೋನ್ ಕದ್ದಾಲಿಕೆ ಪ್ರಕರಣ ಸಂಬಂಧ ತನಿಖೆ ಚುರುಗೊಳಿಸಿರುವ ಸಿಬಿಐ, 54 ಪೊಲೀಸ್ ಇನ್ಸ್‌ಪೆಕ್ಟರ್‌ಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ ಎಂದು ವರದಿಯಾಗಿದೆ.

ಈ ಬಗ್ಗೆ ಟೆಲಿಗ್ರಾಫ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಕೇಂದ್ರ ತನಿಖಾ ಸಂಸ್ಥೆ ಅಧಿಕಾರಿಗಳು, ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪದ ಮೇರೆಗೆ ಈ ಹಿಂದೆ ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಸೇರಿದಂತೆ ಹಲವರನ್ನು ವಿಚಾರಣೆಗೊಳಪಡಿಸಿದ್ದರು.

ಈಗ ವಿವಿಧ ಠಾಣೆಯ ಒಟ್ಟು 54 ಪೊಲೀಸ್ ಇನ್ಸ್‌ಪೆಕ್ಟರ್‌ಗಳಿಗೆ ನೋಟಿಸ್ ಜಾರಿಗೊಳಿಸಿ, ನವೆಂಬರ್ ಮೊದನೆಯೇ ವಾರದಲ್ಲಿಯೇ ಹಾಜರಾಗುವಂತೆ ಸೂಚಿಸಿದ್ದಾರೆಂದು ತಿಳಿದುಬಂದಿದೆ. ಈ ಎಲ್ಲ ಪೊಲೀಸ್ ಇನ್ಸ್‌ಪೆಕ್ಟರ್‌ಗಳು ತಮ್ಮ ವ್ಯಾಪ್ತಿಗೊಳಪಟ್ಟ ಆರೋಪಿಗಳ ಫೋನ್ ಟ್ಯಾಪಿಂಗ್ ಮಾಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆ ಇವರಿಗೆ ನೋಟಿಸ್ ನೀಡಿರುವ ಸಿಬಿಐ, ಫೋನ್ ಟ್ಯಾಪಿಂಗ್ ಯಾವ ಉದ್ದೇಶಕ್ಕಾಗಿ ಮಾಡಲಾಗಿದೆ ಕುರಿತು ಪ್ರಶ್ನೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News