ಹಿರಿಯರೆಡೆಗೆ ಸಾಹಿತ್ಯದ ನಡಿಗೆ ಕಾರ್ಯಕ್ರಮ
Update: 2019-11-03 22:20 IST
ಉಡುಪಿ, ನ.3: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾ ಘಟಕ ಮತ್ತು ಮಣೂರು ಗೀತಾನಂದ ಫೌಂಡೇಶನ್ ಜಂಟಿ ಆಶ್ರಯದಲ್ಲಿ ತಿಂಗಳ ಸಡಗರ ಸಂಪದ ಅಂಗವಾಗಿ ಹಿರಿಯರೆಡೆಗೆ ಸಾಹಿತ್ಯದ ನಡಿಗೆ ಕಾರ್ಯಕ್ರಮದಡಿಯಲ್ಲಿ ಭಾಸ್ಕರ್ ಶೆಟ್ಟಿ ಅವರನ್ನು ಗೌರವಿಸಲಾಯಿತು.
ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿ, ಹಿರಿಯರನ್ನು ಗೌರವಿಸುವ ಮತ್ತು ಅವರ ಅನುಭವಗಳನ್ನು ಪುಸ್ತಕ ರೂಪದಲ್ಲಿ ತರುವ ಮಹತ್ವದ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಈಗಾಗಲೇ 102 ಜನಸಾಧಕರನ್ನು ಅವರ ಸ್ವಗೃಹದಲ್ಲಿ ಗೌರವಿಸಲಾಗಿದೆ. ಆ ಹಿರಿಯರ ಅನುಭವಗಳು ದಾಖಲಾದರೆ ಅದು ಮುಂದಿನ ಪೀಳಿಗೆಗೆ ಕೈದೀವಿಗೆ ಆಗುವುದರಲ್ಲಿ ಸಂಶಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.
ಅಧ್ಯಕ್ಷತೆಯನ್ನು ವಸಂತಿ ಶೆಟ್ಟಿ ಬ್ರಹ್ಮಾವರ ವಹಿಸಿದ್ದರು. ರಾಜಗೋಪಾಲ್ ಸನ್ಮಾನಿತರನ್ನು ಪರಿಚಯಿಸಿದರು. ಕೆ.ಮುರುಳಿಧರ ಸ್ವಾಗತಿಸಿದರು. ಗಣೇಶ್ ಬ್ರಹ್ಮಾವರ ವಂದಿಸಿದರು. ಸುಬ್ರಹ್ಮಣ್ಯ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.