‘ಉತ್ತಮ ಆರೋಗ್ಯದಿಂದ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ’
ಉಡುಪಿ, ನ.4: ಉತ್ತಮ ಆರೋಗ್ಯದಿಂದ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ ಎಂದು ಕೊಳಲಗಿರಿ ಚರ್ಚಿನ ಧರ್ಮಗುರು ರೆ.ಫಾ. ಅನಿಲ್ ಪ್ರಕಾಶ್ ಕ್ರಾಸ್ತೊಲಿನೋ ಹೇಳಿದ್ದಾರೆ.
ಕೆಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ಕೊಳಲಗಿರಿ ಘಟಕ, ಕೊಳಲ ಗಿರಿ ಯುವ ವಿಚಾರ ವೇದಿಕೆ ಹಾಗೂ ಮಣಿಪಾಲ ಕೆಎಂಸಿ ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ಕೊಳಲಗಿರಿ ಸಂತ ಕ್ಸೇವಿಯರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರವಿವಾರ ಆಯೋಜಿಸಲಾದ ಉಚಿತ ವೈದ್ಯಕೀಯ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಕೆಎಂಸಿ ಆಸ್ಪತ್ರೆಯ ವೈದ್ಯೆ ಡಾ.ಸುನಂದಾ, ಕೆಥೊಲಿಕ್ ಸಭಾದ ಫಾತಿಮ ಬಾರ್ನೆಸ್, ಯುವ ವಿಚಾರ ವೇದಿಕೆ ಅಧ್ಯಕ್ಷ ದಿನೇಶ್ ಶೆಟ್ಟಿ, ಚರ್ಚ್‌ನ ಪಾಲನ ಮಂಡಳಿಯ ಉಪಾಧ್ಯಕ್ಷ ವಿನ್ಸೆಂಟ್ ಡಿಸೋಜ ಉಪಸ್ಥಿತರಿದ್ದರು. ಸುಬ್ರಹ್ಮಣ್ಯ ಆಚಾರ್ಯ ಸ್ವಾಗತಿಸಿದರು. ಅಶ್ವಿನ್ ರೋಚ್ ವಂದಿಸಿದರು. ಯೋಗೀಶ್ ಕೊಳಲಗಿರಿ ಕಾರ್ಯಕ್ರಮ ನಿರೂಪಿಸಿದರು.
ಶಿಬಿರದಲ್ಲಿ ಕೆಎಂಸಿ ಆಸ್ಪತ್ರೆಯ ತಜ್ಞ ವೈದ್ಯರುಗಳಿಂದ ಕಿವಿ, ಮೂಗು, ಗಂಟಲು, ಕಣ್ಣು, ಚರ್ಮ, ಮಹಿಳಾ ಮತ್ತು ಮಕ್ಕಳ ಆರೋಗ್ಯ, ಸಾಮಾನ್ಯ ತಪಾಸಣೆ ಹಾಗೂ ದಂತ ಚಿಕಿತ್ಸೆಯನ್ನು ನಡೆಸಲಾಯಿತು. ನೂರಾರು ಮಂದಿ ಗ್ರಾಮಸ್ಥರು ಶಿಬಿರದ ಪ್ರಯೋಜನವನ್ನು ಪಡೆದರು.