×
Ad

ನ.5ರಿಂದ ಉಡುಪಿ ಜಿಲ್ಲಾ ವಿಜ್ಞಾನ ಶಿಕ್ಷಕರಿಗೆ ತರಬೇತಿ

Update: 2019-11-04 21:45 IST

ಉಡುಪಿ, ನ.4: ಭಾರತ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ರಾಷ್ಟ್ರೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ ಹೊಸದಿಲ್ಲಿ ಇವರು ಈ ವರ್ಷವೂ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶವನ್ನು ಈ ವರ್ಷವೂ ನಡೆಸುತಿದ್ದು, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಅದನ್ನು ಉಡುಪಿ ಜಿಲ್ಲೆಯಲ್ಲಿ ಆಯೋಜಿಸುತ್ತಿದೆ.

ಇದಕ್ಕಾಗಿ ‘ಸ್ವಚ್ಛ ಹಸಿರು ಮತ್ತು ಆರೋಗ್ಯವಂತ ರಾಷ್ಟ್ರಕ್ಕಾಗಿ ವಿಜ್ಞಾನ, ತಂತ್ರಜ್ಞಾನ ಮತ್ತು ಆವಿಷ್ಕಾರಗಳು’ ಎಂಬ ವಿಷಯದಲ್ಲಿ 10ರಿಂದ 17ವರ್ಷ ವಯೋಮಾನದ ಮಕ್ಕಳಿಂದ ಯೋಜನೆಗಳನ್ನು ಆಹ್ವಾನಿಸುತ್ತಿದೆ.ಮೊದಲು ಜಿಲ್ಲಾ ಮಟ್ಟದಲ್ಲಿ ಬಳಿಕ ರಾಜ್ಯ ಮಟ್ಟದಲ್ಲಿ ಹಾಗೂ ಅನಂತರ ಮೂರನೇ ಹಂತದಲ್ಲಿ 30 ಅತ್ಯುತ್ತಮ ಯೋಜನೆಗಳು ರಾಷ್ಟ್ರ ಮಟ್ಟ ಆಯ್ಕೆಯಾಗಲಿವೆ.

ಯೋಜನೆಯ ಈ ಯೋಜನೆಗಳಿಗೆ ಮಾರ್ಗದರ್ಶನ ಮಾಡಲಿಚ್ಛಿಸುವ ಶಿಕ್ಷಕರಿಗೆ ತರಬೇತಿ ನೀಡುವ ಕಾರ್ಯಕ್ರಮವನ್ನು ನ.5ರಂದು ಕುಂದಾಪುರದ ಶ್ರೀವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ, ನ.6ರಂದು ವಳಕಾಡು ಸರಕಾರಿ ಪ್ರೌಢಶಾಲೆಗಳಲ್ಲಿ ನಡೆಸಲು ಜಿಲ್ಲಾ ಸಮಿತಿ ನಿರ್ಧರಿಸಿದೆ ಎಂದು ಮಕ್ಕಳ ವಿಜ್ಞಾನ ಸಮಾವೇಶದ ಜಿಲ್ಲಾ ಸಂಯೋಜಕ ದಿನೇಶ್ ಶೆಟ್ಟಿಗಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News