ಅಪಘಾತ: ಗಾಯಾಳು ಬ್ಯಾಂಕ್ ಉದ್ಯೋಗಿ ಮೃತ್ಯು
Update: 2019-11-04 21:53 IST
ಕಾಪು, ನ.4: ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನ.3ರಂದು ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಕಟಪಾಡಿ ಅಗ್ರಹಾರ ಮೂಲದ, ಪ್ರಸ್ತುತ ಕೊರಂಗ್ರಪಾಡಿ ನಿವಾಸಿ ರವೀಂದ್ರನಾಥ್ ಎಂದು ಗುರುತಿಸಲಾಗಿದೆ. ಬ್ಯಾಂಕ್ ಉದ್ಯೋಗಿಯಾಗಿದ್ದ ಇವರು, ತನ್ನ ತಮ್ಮನ ಜೊತೆ ರಸ್ತೆ ಬಳಿ ನಿಂತು ಮಾತನಾಡುತಿದ್ದಾಗ ಮಂಗಳೂರು ಕಡೆಯಿಂದ ಉಡುಪಿ ಕಡೆ ಹೋಗುತ್ತಿದ್ದ ಕಾರು ಢಿಕ್ಕಿ ಹೊಡೆ ಯಿತ್ತೆನ್ನಲಾಗಿದೆ.
ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ರವೀಂದ್ರನಾಥ್ ಚಿಕಿತ್ಸೆ ಫಲ ಕಾರಿಯಾಗದೆ ರವಿವಾರ ರಾತ್ರಿ ವೇಳೆ ಮಣಿಪಾಲದ ಆಸ್ಪತ್ರೆಯಲ್ಲಿ ಮೃತ ಪಟ್ಟರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.