ಹು-ಧಾ ಮಹಾನಗರ ಪಾಲಿಕೆ ಚುನಾವಣೆ: ಜ.3ರೊಳಗೆ ಮೀಸಲು ಪ್ರಕಟಿಸಲು ಹೈಕೋರ್ಟ್ ನಿರ್ದೇಶನ

Update: 2019-11-04 16:35 GMT

ಬೆಂಗಳೂರು, ನ.4: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ 2020ರ ಜ.3ರೊಳಗೆ ವಾರ್ಡ್‌ವಾರು ಮೀಸಲು ಪ್ರಕಟಿಸಲು ರಾಜ್ಯ ಸರಕಾರಕ್ಕೆ ನಿದೇಶಿಸಿದೆ.

ಈ ಕುರಿತು ಗುರುನಾಥ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಈ ಹಿಂದೆ ರಾಜ್ಯದಲ್ಲಿ ಆಡಳಿತದಲ್ಲಿದ್ದ ಸರಕಾರ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಮೀಸಲು ಹಿಂಪಡೆದು ಹೊಸದಾಗಿ ಪ್ರಕಟಿಸುವುದಾಗಿ ತಿಳಿಸಿತ್ತು. ಆದರೆ, ಇಲ್ಲಿಯವರೆಗೆ ಪ್ರಕಟಿಸದೆ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಅರ್ಜಿದಾರರ ಪರ ವಕೀಲರು ಪೀಠಕ್ಕೆ ತಿಳಿಸಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಜ.3ರೊಳಗೆ ಮೀಸಲು ಪ್ರಕಟಿಸಲು ನಿರ್ದೇಶಿಸಿ, ವಿಚಾರಣೆಯನ್ನು ಜ.6ಕ್ಕೆ ಮುಂದೂಡಿತು.

.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News