ಬೆಂಗಳೂರು ನಗರ ಜಿಲ್ಲೆಗೆ ಅತ್ಯುತ್ತಮ ಸಾಧಕ ಪ್ರಶಸ್ತಿ
Update: 2019-11-04 22:14 IST
ಬೆಂಗಳೂರು, ನ. 4: ಹೊಸದಿಲ್ಲಿಯಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಬೆಳ್ಳಿ ಮಹೋತ್ಸವ ಮತ್ತು ಇಂದ್ರಧನುಷ್ ಅಭಿಯಾನ ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಜಿಲ್ಲೆಯು ಶೇ.90ಕ್ಕಿಂತ ಅಧಿಕ ಸಾಧನೆ ಮಾಡಿರುವುದಕ್ಕೆ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಹಾಗೂ ಮಾಜಿ ಸಚಿವ ಜೆ.ಪಿ.ನಡ್ಡಾ ಅಭಿನಂದಿಸಿದ್ದಾರೆ.
ಇದೇ ವೇಳೆ ಬೆಂಗಳೂರು ನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಿ.ಎ.ಶ್ರೀನಿವಾಸ, ಬೆಂಗಳೂರು ನಗರ ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಸೈಯದ್ ಸಿರಾಜುದ್ದೀನ್ ಮದನಿ ಅವರಿಗೆ ಅತ್ಯುತ್ತಮ ಸಾಧಕ ಪ್ರಶಸ್ತಿ ನೀಡಿ ಗೌರವಿಸಿದರು.