ಬಂಟ್ವಾಳ: ಕುಸಿದು ಬಿದ್ದು ಕಾರ್ಮಿಕ ಮೃತ್ಯು
Update: 2019-11-04 22:35 IST
ಬಂಟ್ವಾಳ : ಬಾರ್ಕೂರು ಮೂಲದ ಕಾರ್ಮಿಕನೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಸೋಮವಾರ ಬೆಂಜನಪದವಿನಲ್ಲಿ ನಡೆದಿದೆ.
ಕಳೆದ 2 ವರ್ಷಗಳ ಹಿಂದೆ ಬೆಂಜನಪದವಿನ ಹೋಟೆಲೊಂದರಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ ಬಾರ್ಕೂರು ಮೂಲದ ಗಣೇಶ್(50) ಮೃತ ವ್ಯಕ್ತಿ. ವಿಪರೀತ ಕುಡಿತದ ಚಟ ಹೊಂದಿದ್ದ ಗಣೇಶ್, ನ. 4ರಂದು ಕೂಡ ಮದ್ಯ ಸೇವಿಸಿದ್ದರೆನ್ನಲಾಗಿದೆ. ಈ ವೇಳೆ ಆಕಸ್ಮಿಕವಾಗಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ಹೊನ್ನಯ್ಯ ಅವರು ನೀಡಿದ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.