ರಾಜ್ಯ ಸರಕಾರ ವಜಾಗೊಳಿಸಲು ಒತ್ತಾಯಿಸಿ ದಾವಣಗೆರೆ ಕಾಂಗ್ರೆಸ್ ಧರಣಿ

Update: 2019-11-04 17:20 GMT

ದಾವಣಗೆರೆ, ನ.4: ರಾಜ್ಯ ಸರಕಾರವನ್ನು ವಜಾಗೊಳಿಸುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಧರಣಿ ನಡೆಸಿದರು. 

ಜಯದೇವ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆ ಕೂಗಿದರು. ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು. 

ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ಹೆಚ್.ಬಿ.ಮಂಜಪ್ಪ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅನರ್ಹ ಶಾಸಕರ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದು, ಎಲ್ಲಾ 17 ಶಾಸಕರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಆದೇಶದ ಮೇರೆಗೆ ರಾಜೀನಾಮೆ ನೀಡಿದ್ದಾರೆ ಮತ್ತು ಅವರನ್ನು ಬಿಜೆಪಿ ನಾಯಕತ್ವದ ನೇರ ಮೇಲ್ವಿಚಾರಣೆಯಲ್ಲಿ ಮುಂಬೈಯಲ್ಲಿ ಇರಿಸಲಾಗಿತ್ತು ಎಂದು ಒಪ್ಪಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಬಿಜೆಪಿ ಸರಕಾರ ಅನೈತಿಕ ಮಾರ್ಗದ ಮೂಲಕ ಅಧಿಕಾರಕ್ಕೆ ಬಂದಿದೆ ಎಂದು ಟೀಕಿಸಿದರು. 

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗೃಹ ಸಚಿವ ಅಮಿತ್ ಶಾ ಅವರು ಜನರ ಆದೇಶ, ಸಂವಿಧಾನದ ನಿಬಂಧನೆಗಳು ಮತ್ತು ಪ್ರಜಾಪ್ರಭುತ್ವದ ತತ್ವಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಯಡಿಯೂರಪ್ಪ ಮತ್ತು ಅಮಿತ್ ಶಾ ಅವರಿಗೆ ಮುಖ್ಯಮಂತ್ರಿ ಮತ್ತು ಕೇಂದ್ರ ಗೃಹ ಸಚಿವರಾಗಿ ಅಧಿಕಾರದಲ್ಲಿ ಮುಂದುವರಿಯಲು ನೈತಿಕ ಹಕ್ಕಿಲ್ಲ. ಕೂಡಲೇ ಅವರ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು. 

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕಾಂಗ್ರೆಸ್ ಪಕ್ಷದ ಶಾಸಕರನ್ನು ಸೆಳೆದಿರುವ ಬಗ್ಗೆ ವಿಡಿಯೋ ವೈರಲ್ ನ್ನು ಸೂಕ್ತ ತನಿಖೆ ನಡೆಸಬೇಕು ಎಂದರು. 

ಈ ಸಂದರ್ಭದಲ್ಲಿ ಡಿ.ಬಸವರಾಜ್, ಬ್ಲಾಕ್ ಅಧ್ಯಕ್ಷ ಪರಶುರಾಮ್, ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಖಾಲಿದ್, ಮೊಹಿನುದ್ದಿನ್ , ಸೋಮಲಾಪುರದ ಹನುಮಂತಪ್ಪ, ಎ ನಾಗರಾಜ್, ಪರಕಾಶ್ ಪಾಟೀಲ್, ಕೆ.ಎಲ್ ಹರೀಶ್, ಡಿ.ಎನ್.ಜಗದೀಶ್, ಸತೀಶ್, ಅಂಜಿನಪ್ಪ, ಸಿದ್ದೇಶ್, ಶುಭಮಂಗಳ, ಶಿರಮನಗೊಂಡನಹಳ್ಳಿ ರುದ್ರೇಶ್, ರಾಧಾಬಾಯಿ, ಮಂಜನಾಯ್ಕ, ದ್ರಾಕ್ಷಾಯಣಮ್ಮ, ಜಯಶ್ರೀ, ಸಂಗಮ್ಮ, ದಿಲ್ ಷಾ, ರಾಜೇಶ್ವರಿ, ಉಸ್ಮಾನ, ಜಬಿವುಲ್ಲಾ, ಮಂಜುನಾಥ್ ಅಣ್ವೇಕರ್ ಸೇರಿ ಅನೇಕರ ಮಂದಿ ಧರಣಿಯಲ್ಲಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News