ಕರಡಿಗವಿ ಮಠದ ಶಂಕರಾನಂದ ಸ್ವಾಮೀಜಿ ನಿಧನ
Update: 2019-11-05 13:20 IST
ಚಿಕ್ಕಮಗಳೂರು, ನ.5: ತಾಲೂಕಿನ ಕರಡಿಗವಿ ಮಠದ ಶಂಕರಾನಂದ ಸ್ವಾಮೀಜಿ (60) ಇಂದು ನಿಧನರಾಗಿದ್ದಾರೆ.
ಕೆಲವು ತಿಂಗಳಿನಿಂದ ಸ್ವಾಮೀಜಿ ಆರೋಗ್ಯ ಹದಗೆಟ್ಟಿತ್ತು. ಕಳೆದ ಎರಡು ತಿಂಗಳಿಂದ ಅವರು ಮೈಸೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮಠಕ್ಕೆ ಕರೆತಂದ ಒಂದೇ ಗಂಟೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.