ಶೋಭಾ ಕರಂದ್ಲಾಜೆ ವಿರುದ್ಧ ಪುಷ್ಪಾ ಅಮರನಾಥ್ ವಾಗ್ದಾಳಿ
Update: 2019-11-05 21:22 IST
ಬೆಂಗಳೂರು, ನ.5: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಹೇಳಿಕೆಗಳನ್ನು ನೀಡಿರುವ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ವಾಗ್ದಾಳಿ ನಡೆಸಿದ್ದಾರೆ.
‘ಕುಮಾರಿ ಶೋಭಾ ಕರಂದ್ಲಾಜೆಯವರೆ, ಕೆಜೆಪಿ ಸುತ್ತಿ ಬಂದ ನಿಮಗೆ, ಕಾಂಗ್ರೆಸ್ ಪಕ್ಷ ಮತ್ತು ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿ ನೇಮಕಗೊಂಡ ಬಗ್ಗೆ ಮಾತನಾಡಲು ಯಾವ ನೈತಿಕ ಹಕ್ಕುಗಳಿವೆ? ನಿಮ್ಮ ಪಕ್ಷದ ಶಾಸಕರು ಮತ್ತು ಸಂಘ ಪರಿವಾರದವರನ್ನು ಕೇಳಿ, ನೀವು ಬಿಜೆಪಿಯಲ್ಲಿ ಹೇಗೆ ಬೆಳೆದಿದ್ದೀರಿ?’ ಎಂದು ಪುಷ್ಪಾ ಅಮರ್‌ನಾಥ್ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.