ಉಚಿತ ಆರೋಗ್ಯ ತಪಾಸಣೆ, ದಂತ ವೈದ್ಯಕೀಯ ಶಿಬಿರ
Update: 2019-11-05 22:08 IST
ಉಡುಪಿ, ನ.5: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಬಂಟರ ಯಾನೆ ನಾಡವರ ಸಂಘ ಬ್ರಹ್ಮಾವರ, ಬ್ರಹ್ಮಾವರ ತಾಲೂಕು ವ್ಯಾಪ್ತಿಯ ಸಮುದಾಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಜಸ್ಟೀಸ್ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ, ಎ.ಬಿ.ಶೆಟ್ಟಿ ಮೆಮೋರಿಯಲ್ ಇನ್‌ಸ್ಟಿಟ್ಯೂಟ್ ಆಪ್ ಡೆಂಟಲ್ ಸೈನ್ಸ್ ದೇರಳಕಟ್ಟೆ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನ.24ರಂದು ಬೆಳಗ್ಗೆ 9:30ರಿಂದ ಅಪರಾಹ್ನ 1 ಗಂಟೆಯವರೆಗೆ ಬ್ರಹ್ಮಾವರ ಬಂಟರ ಭವನದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ದಂತ ವೈದ್ಯಕೀಯ ಶಿಬಿರ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.