ಕೇರಳ: ವಿದ್ಯಾರ್ಥಿಗಳಿಗೆ ಮೊಬೈಲ್, ಶಿಕ್ಷಕರಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧ

Update: 2019-11-05 18:33 GMT

ತಿರುವನಂತಪುರಂ, ನ.5: ಶಾಲೆಯಲ್ಲಿ ವಿದ್ಯಾರ್ಥಿಗಳು ಮೊಬೈಲ್ ಫೋನ್ ಬಳಸುವುದನ್ನು ನಿಷೇಧಿಸಲು ಕೇರಳ ಸರಕಾರ ನಿರ್ಧರಿಸಿದೆ. ಅಲ್ಲದೆ, ಶಾಲೆಯಲ್ಲಿರುವಾಗ ಶಿಕ್ಷಕರು ಸಾಮಾಜಿಕ ಮಾಧ್ಯಮಗಳನ್ನು ಬಳಸುವುದನ್ನೂ ನಿಷೇಧಿಸಿ ಸರಕಾರ ಆದೇಶ ಹೊರಡಿಸಿದೆ.

ವಿದ್ಯಾರ್ಥಿಗಳಲ್ಲಿ ಮೊಬೈಲ್ ಫೋನ್‌ನ ಗೀಳು ಅತಿಯಾಗಿರುವುದು ಹಾಗೂ ಶಿಕ್ಷಕರಲ್ಲಿ ಸಾಮಾಜಿಕ ಜಾಲತಾಣಗಳ ಚಟ ಹೆಚ್ಚುತ್ತಿರುವ ಬಗ್ಗೆ ಆತಂಕ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಈ ಕುರಿತ ಸುತ್ತೋಲೆ ಹೊರಡಿಸಿದೆ. ಶಾಲೆಯಲ್ಲಿ ಮೊಬೈಲ್ ಫೋನ್ ಬಳಕೆ ನಿಷೇಧಿಸುವ ಸ್ಥಾಯಿ ಆದೇಶವಿದ್ದರೂ ಈ ಆದೇಶ ಜಾರಿಗೊಳಿಸುವಲ್ಲಿ ಅಧಿಕಾರಿಗಳು ಆಲಸ್ಯ ತಳೆದಿದ್ದಾರೆ ಎಂಬ ವರದಿಯ ಹಿನ್ನೆಲೆಯಲ್ಲಿ ಸರಕಾರ ಈ ಆದೇಶ ಹೊರಡಿಸಿದೆ.

ಆದರೆ, ಶಿಕ್ಷಕರಿಗೆ ಶಾಲೆಯಲ್ಲಿ ಸಾಮಾಜಿಕ ಮಾಧ್ಯಮಗಳ ಬಳಕೆ ನಿಷೇಧಿಸಿರುವ ಆದೇಶ ರಾಜ್ಯದಲ್ಲಿ ಇದೇ ಪ್ರಥಮವಾಗಿದೆ. ಶಿಕ್ಷಕರು ತರಗತಿಯಲ್ಲಿರುವಾಗ ಫೇಸ್‌ಬುಕ್ ಮತ್ತು ವಾಟ್ಸಾಪ್‌ನಂತಹ ಸಾಮಾಜಿಕ ಮಾಧ್ಯಮವನ್ನು ಬಳಸಬಾರದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News