ಉಪ ಚುನಾವಣೆ ನೀತಿ ಸಂಹಿತೆ ಮುಂದೂಡಿಕೆ ವಿವಾದ: ಪ್ರತಿವಾದಿಗಳಿಗೆ ಹೈಕೋರ್ಟ್ ನೋಟಿಸ್ ಜಾರಿ

Update: 2019-11-06 15:31 GMT

ಬೆಂಗಳೂರು, ನ.6: ರಾಜ್ಯದ ಅನರ್ಹ ಶಾಸಕರ 15 ವಿಧಾನಸಭಾ ಕ್ಷೇತ್ರಗಳಿಗೆ ಈಗಾಗಲೇ ಉಪ ಚುನಾವಣೆ ಘೋಷಣೆಯಾಗಿದ್ದರೂ ನೀತಿ ಸಂಹಿತೆ ಜಾರಿಗೊಳಿಸದ ರಾಜ್ಯ ಸರಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ಚುನಾವಣೆ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿದೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ನ್ಯಾಯಪೀಠವು ಮಧ್ಯಂತರ ಆದೇಶ ನೀಡಿ ನೀತಿ ಸಂಹಿತೆ ಜಾರಿಗೊಳಿಸಿ ಎಂದು ಆದೇಶಿಸಲು ಬರುವುದಿಲ್ಲ ಎಂದು ಸೂಚಿಸಿ, ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿತು.

ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ 2019ರ ಸೆ.27ರಂದು ಪ್ರಕಟಿಸಿರುವ ಪರಿಷ್ಕೃತ ವೇಳಾಪಟ್ಟಿ ಮತ್ತು ನೀತಿ ಸಂಹಿತೆ ನ.11ರಿಂದ ಜಾರಿಗೆ ಬರುವಂತೆ ಚುನಾವಣಾ ಆಯೋಗ ಹೊರಡಿಸಿರುವ ಅಧಿಸೂಚನೆ ರದ್ದುಗೊಳಿಸಬೇಕೆಂದು ಅರ್ಜಿದಾರರು ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News