ಕಬ್ಬನ್ ಪಾರ್ಕ್‌ನಲ್ಲಿ ಕಟ್ಟಡ ನಿರ್ಮಾಣ ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್

Update: 2019-11-06 16:20 GMT

ಬೆಂಗಳೂರು, ನ.6: ಕಬ್ಬನ್ ಪಾರ್ಕ್‌ನಲ್ಲಿ 7 ಅಂತಸ್ತಿನ ಕಟ್ಟಡ ನಿರ್ಮಿಸಲು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಕಬ್ಬನ್ ಪಾರ್ಕ್ ನಡಿಗೆದಾರರ ಸಂಘ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದೆ. ಅರ್ಜಿಯು ಇನ್ನಷ್ಟೇ ವಿಚಾರಣೆಗೆ ಬರಬೇಕಾಗಿದೆ.

ಕಬ್ಬನ್ ಪಾರ್ಕ್‌ನಲ್ಲಿ 7 ಅಂತಸ್ತಿನ ಕಟ್ಟಡವನ್ನು ನಿರ್ಮಾಣ ಮಾಡಲು ಅನುಮತಿ ನೀಡಿದರೆ ಅದರಿಂದ ಸುತ್ತಮುತ್ತಲಿನ ಪರಿಸರಕ್ಕೆ ಹಾನಿ ಆಗುತ್ತದೆ. ಭದ್ರತೆ ದೃಷ್ಟಿಯಿಂದಲೂ ಕಟ್ಟಡ ಅಪಾಯಕಾರಿಯಾಗುತ್ತದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಈ ಕೂಡಲೇ ನ್ಯಾಯಪೀಠವು ಸರಕಾರದ ಪ್ರಸ್ತಾವನೆಗೆ ನೀಡಿರುವ ಅನುಮತಿ ಆದೇಶವನ್ನು ರದ್ದುಗೊಳಿಸಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಅರ್ಜಿಯಲ್ಲಿ ರಾಜ್ಯ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ, ತೋಟಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಕಬ್ಬನ್ ಪಾರ್ಕ್ ಉಪ ನಿರ್ದೇಶಕರು, ಬಿಡಿಎ ಮತ್ತು ಬಿಬಿಎಂಪಿ ಆಯುಕ್ತರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News