ಉಡುಪಿ: ತಾಪಂ, ಗ್ರಾಪಂ ಉಪಚುನಾವಣೆಗೆ ಸಾರ್ವತ್ರಿಕ ರಜೆ
ಉಡುಪಿ, ನ.6: ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಬ್ರಹ್ಮಾವರ ತಾಲೂಕಿನ ಬಾರಕೂರು ತಾಪಂ ಕ್ಷೇತ್ರ, ಕಟಪಾಡಿ ಗ್ರಾಪಂ ವ್ಯಾಪ್ತಿಯ ಏಣಗುಡ್ಡೆ, ಬಿಲ್ಲಾಡಿ ಗ್ರಾಪಂ ವ್ಯಾಪ್ತಿಯ ಬಿಲ್ಲಾಡಿ, ಮುಂಡ್ಕೂರು ಗ್ರಾಪಂ ವ್ಯಾಪ್ತಿಯ ಮುಲ್ಲಡ್ಕ, ಕಲ್ಯಾ ಗ್ರಾಪಂ ವ್ಯಾಪ್ತಿಯ ಕಲ್ಯಾ ಸದಸ್ಯ ಸ್ಥಾನ ಗಳಿಗೆ ನ.12ರಂದು ಉಪಚುನಾವಣೆ ನಡೆಯಲಿದ್ದು, ಈ ಕ್ಷೇತ್ರಗಳ ವ್ಯಾಪ್ತಿ ಯಲ್ಲಿರುವ ಎಲ್ಲಾ ರಾಜ್ಯ ಸರಕಾರಿ ಕಚೇರಿಗಳು, ಶಾಲಾ ಕಾಲೇಜುಗಳು (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ ) ಮತ್ತು ಸರಕಾರಿ ಸ್ವಾಮ್ಯದ ಸಂಸ್ಥೆಗಳು ಸೇರಿದಂತೆ ಆ ದಿನದಂದು ಸಾರ್ವತ್ರಿಕ ರಜೆಯನ್ನು ಸರಕಾರ ಘೋಷಿಸಿದೆ.
ಈ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ಸಾರ್ವಜನಿಕ ಉದ್ದಿಮೆ ಗಳು, ವ್ಯವಹಾರಿಕ ಸಂಸ್ಥೆಗಳು, ಖಾಸಗಿ ಕಂಪೆನಿಗಳು ಮತ್ತು ಇನ್ನಿತರ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲ ವಾಗುವಂತೆ ವೇತನಸಹಿತ ರಜೆ ನೀಡುವಂತೆ ತಿಳಿಸಲಾಗಿದೆ.