×
Ad

ನಿಷೇಧಿತ ಪ್ಲಾಸ್ಟಿಕ್ ಮಾರಾಟ: ಪೌರಾಯುಕ್ತರಿಂದ ಕಾರ್ಯಾಚರಣೆ

Update: 2019-11-06 22:19 IST

ಉಡುಪಿ, ನ.6: ಉಡುಪಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಹಾಗೂ ಆದಿ ಉಡುಪಿ ಎಪಿಎಂಸಿ ಮಾರುಕಟ್ಟೆಗೆ ಇಂದು ಬೆಳಗ್ಗೆ ದಾಳಿ ನಡೆಸಿದ ಉಡುಪಿ ಪೌರಾಯುಕ್ತ ಆನಂದ ಕಲ್ಲೋಲಿಕರ್ ನೇತೃತ್ವದ ತಂಡ ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ವರ್ತಕರಿಗೆ ದಂಡ ವಿಧಿಸಿದೆ.

ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಳಿಯ ಒಂದು ಅಂಗಡಿ ಹಾಗೂ ಎಪಿಎಂಸಿ ಮಾರುಕಟ್ಟೆಯಲ್ಲಿ ಆರು ಮಂದಿ ವರ್ತಕರಿಗೆ ತಲಾ ಒಂದು ಸಾವಿರ ರೂ.ನಂತೆ ಒಟ್ಟು 7ಸಾವಿರ ರೂ. ದಂಡ ವಿಧಿಸಲಾಗಿದೆ. ಇವರಿಂದ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಪ್ಲಾಸ್ಟಿಕ್ ಲೋಟ, ಚಮಚ, ಸ್ಟ್ರಾಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಉಡುಪಿ ವೃತ್ತ ನಿರೀಕ್ಷಕ ಮಂಜುನಾಥ್, ನಗರ ಸಭೆಯ ಆರೋಗ್ಯ ನಿರೀಕ್ಷಕರು, ವ್ಯವಸ್ಥಾಪಕ ಹಾಗೂ ಪೊಲೀಸ್ ಸಿಬ್ಬಂದಿ ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News