ವಿಧಾನಸೌಧದ ಎರಡನೇ ಮಹಡಿಯಲ್ಲಿ ಬೆಂಕಿ

Update: 2019-11-06 16:53 GMT

ಬೆಂಗಳೂರು: ಶಾರ್ಟ್ ಸರ್ಕ್ಯೂಟ್​ನಿಂದಾಗಿ ವಿಧಾನಸೌಧದ ಎರಡನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡು, ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.

ವಿಧಾನ ಸೌಧದ 203 ರೂಂ ನಂಬರ್ ಆರ್ಥಿಕ ಇಲಾಖೆ ಉಪ ಕಾರ್ಯದರ್ಶಿ ಪದ್ಮಾವತಿ ಅವರ ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿತ್ತು. ಎಲೆಕ್ಟ್ರಿಕ್ ಬೋರ್ಡ್ ನಲ್ಲಿ ಬೆಂಕಿ ಕಾಣಿಸುತ್ತಿದ್ದಂತ್ತೆ ಸಿಬ್ಬಂದಿ ವಿದ್ಯುತ್ ಸ್ಥಗಿತಗೊಳಿಸಿದ್ದಾರೆ. ಕೆಲಕಾಲ ವಿಧಾನಸೌಧ ಸಿಬ್ಬಂದಿಯಲ್ಲಿ ಆತಂಕ ಮನೆ ಮಾಡಿತ್ತು.

ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಬೆಂಕಿಯನ್ನು ನಂದಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News