ಕೋಟೇಶ್ವರ, ನಾವುಂದ ನಿವೇಶನ ರಹಿತರ ಸಮಾವೇಶ

Update: 2019-11-07 12:31 GMT

 ಕುಂದಾಪುರ, ನ.7: ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಉಡುಪಿ ಜಿಲ್ಲಾ ಸಮಿತಿ ಹಾಗೂ ನಿವೇಶನ ರಹಹಿತರ ಹೋರಾಟ ಸಮಿತಿ ಆಶ್ರಯದಲ್ಲಿ ನಿವೇಶನ ರಹಿತರಿಗೆ ಭೂಮಿ ಹಕ್ಕುಪತ್ರ ನೀಡುವಂತೆ ಒತ್ತಾಯಿಸಿ ನ.18ರಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಯುವ ಧರಣಿ ಮುಷ್ಕರದ ಹಿನ್ನೆಲೆಯಲ್ಲಿ ನ.5ರಂದು ಕೊಟೇಶ್ವರ ಗ್ರಾಪಂ ವ್ಯಾಪ್ತಿಯ ನಿವೇಶನ ರಹಿತರ ಸಮಾವೇಶ ಆಯೋಜಿಸಲಾಗಿತ್ತು.

ಸಮಾವೇಶವನ್ನು ಉದ್ಘಾಟಿಸಿದ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ ಕಲ್ಲಾಗರ್ ಮಾತನಾಡಿ, ನಿವೇಶನ ರಹಿತರ ಧರಣಿ ಮುಷ್ಕರ ಹೋರಾಟವನ್ನು ಯಶಸ್ವಿಗೊಳಿಸಲು ಸಿಐಟಿಯು ಉಡುಪಿ ಜಿಲ್ಲಾ ಸಮಿತಿಯು ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ಹೇಳಿದರು.

ಅಧ್ಯಕ್ಷತೆಯನ್ನು ರವೀಂದ್ರ ಭಟ್ ವಹಿಸಿದ್ದರು. ಕೃಷಿಕೂಲಿಕಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಕೋಣಿ, ಮುಖಂಡರಾದ ನಾಗರತ್ನ ನಾಡ, ಪದ್ಮಾವತಿ ಶೆಟ್ಟಿ ಕಾಂಚನಮಾಲ, ಅಮ್ಮಯ್ಯ ಪೂಜಾರಿ, ರಾಘವೇಂದ್ರ ಉಪ್ಪುಂ ಮೊದಲಾದವರು ಉಪಸ್ಥಿತರಿದ್ದರು.
ನಾವುಂದ: ನಾವುಂದ ಗ್ರಾಪಂ ವ್ಯಾಪ್ತಿಯ ಮನೆ, ನಿವೇಶನ ರಹಿತರ ಸಮಾವೇಶ ಸ್ಥಳೀಯ ಗ್ರಾಪಂ ಕಚೇರಿ ವಠಾರದಲ್ಲಿ ಜರಗಿತು.

ನಾವುಂದ ಗ್ರಾಪಂ ವ್ಯಾಪ್ತಿಯಲ್ಲಿ ಈಗಾಗಲೇ ಗುರುತಿಸಿರುವ ಸರಕಾರಿ ಜಾಗವನ್ನು ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಲು ಸರಕಾರ ಮುಂದಾಗಬೇಕು ಹಾಗೂ ಡೀಮ್ಡ್ ಫಾರೆಸ್ಟ್ ಕಾನೂನು ತೊಡಕನ್ನು ತೆಗೆದುಹಾಕಬೇಕು ಎಂದು ಸಂಘದ ಉಡುಪಿ ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಕೋಣಿ ಆಗ್ರಹಿಸಿದರು.

ಈ ಸಂದರ್ಭದಲ್ಲಿ ನಾವುಂದ ಗ್ರಾಪಂ ಅಧ್ಯಕ್ಷ ನರಸಿಂಹ ದೇವಾಡಿಗ ಮಾತ ನಾಡಿ, ಗ್ರಾಪಂ ವತಿಯಿಂದ ನಿವೇಶನ ರಹಿತರಿಗೆ ನಿವೇಶನ ಖರೀದಿಸಲಾಗಿದ್ದು, ಅತೀ ಶೀಘ್ರವಾಗಿ ಹಕ್ಕು ಪತ್ರ ವಿತರಣೆ ಮಾಡಲಾಗುವುದೆಂದು ಭರವಸೆ ನೀಡಿದರು.

ಮುಖಂಡರಾದ ನಾಗರತ್ನ ನಾಡ, ಸಿಂಗಾರಿ ನಾವುಂದ, ರಾಘವೇಂದ್ರ ಉಪ್ಪುಂದ, ಶೀಲಾವತಿ ಉಪಸ್ಥಿತರಿದ್ದರು. ನಾವುಂದ ಗ್ರಾಪಂ ವ್ಯಾಪ್ತಿಯ ಮನೆ, ನಿವೇಶನ ರಹಿತರ ಹೋರಾಟ ಸಮಿತಿಯನ್ನು ಸಿಂಗಾರಿ ನಾವುಂದ ಸಂಾ ಲಕತ್ವದಲ್ಲಿ ಆಯ್ಕೆ ಮಾಡಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News