ನಗರ, ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ: 2018ರ ಆದೇಶ ವಾಪಸ್ ಪಡೆದ ಸರಕಾರ

Update: 2019-11-07 14:16 GMT

ಬೆಂಗಳೂರು, ನ.7: ರಾಜ್ಯದ ನಗರ ಸ್ಥಳೀಯ ಸಂಸ್ಥೆ, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ 2018ರ ಸೆ.3ರಂದು ಹೊರಡಿಸಿದ್ದ ಅಧಿಸೂಚನೆಯನ್ನು ರಾಜ್ಯ ಸರಕಾರ ವಾಪಸು ಪಡೆದಿರುವುದಾಗಿ ಹೈಕೋರ್ಟ್‌ಗೆ ತಿಳಿಸಿದೆ.

ಈ ಕುರಿತು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರು, ರಾಜ್ಯ ಸರಕಾರ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಸಂಬಂಧ ಕಳೆದ ವರ್ಷ ಸೆ.3ರಂದು ಹೊರಡಿಸಿದ್ದ ಅಧಿಸೂಚನೆಯನ್ನು ವಾಪಸ್ ಪಡೆಯಲು ತೀರ್ಮಾನಿಸಿದೆ. ಅಲ್ಲದೆ, ಮೀಸಲಾತಿಯನ್ನು ಮರು ನಿಗದಿಪಡಿಸಿ ಒಂದು ತಿಂಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಪೀಠಕ್ಕೆ ತಿಳಿಸಿದರು. ನ್ಯಾಯಪೀಠವು ವಕೀಲರ ಹೇಳಿಕೆಯನ್ನು ದಾಖಲಿಸಿಕೊಂಡು ಅರ್ಜಿಗಳನ್ನು ವಿಲೇವಾರಿ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News