ಭಟ್ಕಳ: ಉರ್ದು ಪ್ರೌಢ ಶಾಲೆಗಳಿಗೆ ಪ್ರಾಜೆಕ್ಟರ್ ವಿತರಣೆ

Update: 2019-11-07 15:09 GMT

ಭಟ್ಕಳ: ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ವಿವಿಧ ಯೋಜನೆಗಳನ್ನು ರೂಪಿಸಿದ್ದು ಯಾರೂ ಕೂಡಾ  ಶಿಕ್ಷಣದಿಂದ ವಂಚಿತರಾಗದಂತೆ ಕ್ರಮ ಕೈಗೊಂಡಿದೆ ಎಂದು ಶಾಸಕ ಸುನಿಲ್ ನಾಯ್ಕ ಹೇಳಿದರು.

ಅವರು ಇಲ್ಲಿನ ಜಾಮಿಯಾ ಜಾಲಿಯ ಉರ್ದು ಪ್ರೌಢ ಶಾಲೆಯಲ್ಲಿ ಪ್ರಧಾನ ಮಂತ್ರಿ ಜನವಿಕಾಸ ಯೋಜನೆಯಡಿಯಲ್ಲಿ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆ ಬೆಂಗಳೂರು ಇವರಿಂದ ತಾಲೂಕಿನ ಸರ್ಕಾರಿ ಉರ್ದು ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ತಲಾ ಒಂದೊಂದು ಪ್ರಾಜೆಕ್ಟರ್, ಸಿ.ಪಿ.ಯು. ವೈಟ್ ಬೋರ್ಡ ಕಿಟ್‌ಗಳನ್ನು ವಿತರಿಸಿ ಮಾತನಾಡುತ್ತಿದ್ದರು.

ಕೇಂದ್ರ ಸರಕಾರವು ಈ ಯೋಜನೆಯಲ್ಲಿ ತಂತ್ರಜ್ಞಾನ, ವಿದ್ಯುನ್ಮಾನ ಕಲಿಕೆ ಮೂಲಕ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಿದೆ. ಪ್ರತಿ ಶಾಲೆಗೂ ಕೂಡಾ ವಿದ್ಯುನ್ಮಾನ ಕಲಿಕಾ ಉಪಕರಣಗಳನ್ನು (ಸ್ಮಾರ್ಟ ಕ್ಲಾಸ್) ನೀಡುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಆರ್. ಮುಂಜಿ, ತಾಲೂಕಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಪ್ರಭಾಕರ ಚಿಕ್ಕನಮನೆ,  ಕ್ಷೇತ್ರ ಸಮನ್ವಯಾಧಿಕಾರಿ ಯಲ್ಲಮ್ಮ, ಅಲ್ಪ ಸಂಖ್ಯಾತರ ವಿಸ್ತರಣಾಧಿಕಾರಿ ಸಂಶುದ್ದೀನ ಮಾತನಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News