ಬಂಟ್ವಾಳ : ಜಮೀಯ್ಯತುಲ್ ಫಲಾಹ್ ನಿಂದ ವಿದ್ಯಾರ್ಥಿ ವೇತನ ವಿತರಣೆ

Update: 2019-11-07 15:16 GMT

ವಿಟ್ಲ : ವಿದ್ಯಾರ್ಥಿಗಳು ವಿದ್ಯಾರ್ಜನೆಗೆ ಸಮಯದಲ್ಲಿ ಜ್ಞಾನ ಹೆಚ್ಚಿಸಿಕೊಳ್ಳುವ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು, ಸಂಘ ಸಂಸ್ಥೆಗಳ ಸಹಕಾರ ಪಡೆದು ಮೇಲೆ ಬಂದಂತಹ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಇನ್ನೊಬ್ಬರಿಗೆ ಸಹಾಯ ಮಾಡುವಂತಹ ಉತ್ತಮ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಕರೆ ನೀಡಿದರು.

ಜಮೀಯ್ಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಮೆಲ್ಕಾರ್ ಮಹಿಳಾ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜಮೀಯ್ಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕಾದ್ಯಕ್ಷ ಹಾಜಿ ಎ.ಉಸ್ಮಾನ್ ಕರೋಪಾಡಿ ಅವರ ಅಧ್ಯಕ್ಷತೆಯಲ್ಲಿ ನಡೆದ  ಈ ಕಾರ್ಯಕ್ರಮದಲ್ಲಿ ಜಿಲ್ಲಾದ್ಯಕ್ಷ  ಕೆ.ಕೆ.ಸಾಹುಲ್ ಹಮೀದ್, ಬಿ.ಮೂಡ ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಯೂಸುಫ್ ವಿಟ್ಲ, ಮೆಲ್ಕಾರ್ ಮಹಿಳಾ ಕಾಲೇಜು ಪ್ರಾಂಶುಪಾಲ ಅಬ್ದುಲ್ ಲತೀಫ್, ಬಂಟ್ವಾಳ ತಾ.ಪಂ.ಉಪಾದ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಸಂಸ್ಥೆಯ ಕಾರ್ಯದರ್ಶಿ ಎಂ.ಎಚ್.ಇಕ್ಬಾಲ್ ಮೆಲ್ಕಾರ್, ಕೋಶಾಧಿಕಾರಿ ಎಫ್.ಎಂ.ಬಶೀರ್ ಫರಂಗಿಪೇಟೆ ಉಪಸ್ಥಿತರಿದ್ದರು. ಇದೇ ವೇಳೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶೇಖ್ ಆದಂ ಸಾಹೇಬ್, ನಿವೃತ್ತ ಶಿಕ್ಷಕ ಹಾಜಿ ಪಕ್ರುದ್ದೀನ್ ಬಿ.ಕೆ, ನಂದಾವರ ಸರಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ದೇವದಾಸ್ ಇವರನ್ನು ಸನ್ಮಾನಿಸಲಾಯಿತು.

ಅಬ್ದುಲ್ ರಝಾಕ್ ಮಾಸ್ಟರ್ ಅನಂತಾಡಿ ಸ್ವಾಗತಿಸಿ, ಸುಲೈಮಾನ್ ಸೂರಿಕುಮೇರು ವಂದಿಸಿದರು. ಬಿ.ಎಂ.ತುಂಬೆ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News