ದೇಶದ ಆರ್ಥಿಕ ಸ್ಥಿತಿ ಬಗ್ಗೆ ಬಿಜೆಪಿ ಸರಕಾರವನ್ನು ತರಾಟೆಗೆ ತೆಗೆದುಕೊಂಡ ಪ್ರಿಯಾಂಕಾ ಗಾಂಧಿ

Update: 2019-11-07 16:11 GMT

ಹೊಸದಿಲ್ಲಿ, ನ. 7: ದೇಶದ ಆರ್ಥಿಕ ಸ್ಥಿತಿ ಬಗ್ಗೆ ಬಿಜೆಪಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಎಲ್ಲ ಕ್ಷೇತ್ರಗಳಲ್ಲಿ ಜನರು ಸಮಸ್ಯೆ ಎದುರಿಸುತ್ತಿದ್ದಾರೆ. ಆದರೆ, ನಮ್ಮನ್ನು ಆಳುವವರು ತಮ್ಮದೇ ಬದುಕಿನಲ್ಲಿ ಬ್ಯುಸಿಯಾಗಿದ್ದಾರೆ ಎಂದಿದ್ದಾರೆ.

‘‘ದೇಶದಲ್ಲಿ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಸೇವಾ ವಲಯ ಕುಸಿದಿದೆ. ಉದ್ಯೋಗ ಇಳಿಕೆಯಾಗುತ್ತಿದೆ. ಎಲ್ಲ ಕ್ಷೇತ್ರಗಳಲ್ಲೂ ಜನರು ಸಮಸ್ಯೆ ಎದುರಿಸುತ್ತಿದ್ದಾರೆ. ಆದರೆ, ಆಡಳಿತ ನಡೆಸುತ್ತಿರುವವರು ತಮ್ಮ ಬದುಕಿನಲ್ಲಿ ಬ್ಯುಸಿಯಾಗಿದ್ದಾರೆ’’ ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

   ಪ್ರಧಾನಿ ನರೇಂದ್ರ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡ ಪ್ರಿಯಾಂಕಾ ಗಾಂಧಿ, ಮೋದಿ ಅವರು ಅಮರಿಕಕ್ಕೆ ತೆರಳಿ ‘ಹೌಡಿ ಮೋದಿ’ ಕಾರ್ಯಕ್ರಮ ನಡೆಸಿದರು. ಆದರೆ, ಅಲ್ಲಿ ಉದ್ಯೋಗ ನಿರ್ವಹಿಸಲು ಬಯಸುವ ಭಾರತೀಯರಿಗೆ ನೀಡುವ ಎಚ್‌ಬಿ1 ವೀಸಾಗಳನ್ನು ನಿರಾಕರಿಸುವುದನ್ನು ಅಮೆರಿಕ ಹೆಚ್ಚಿಸಿತು ಎಂದು ಅವರು ಇನ್ನೊಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

 ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕಾರಾವಧಿಯಲ್ಲಿ ಯಾರಿಗೆ ಲಾಭವಾಯಿತು ಎಂದು ಪ್ರತಿಯೊಬ್ಬರೂ ಬಿಜೆಪಿ ಸರಕಾರದಲ್ಲಿ ಕೇಳುತ್ತಿದ್ದಾರೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News