ಅಯೋಧ್ಯೆ ತೀರ್ಪಿಗೆ ದಿನಗಣನೆ: ಕಟ್ಟೆಚ್ಚರ ವಹಿಸಲು ರಾಜ್ಯಗಳಿಗೆ ಕೇಂದ್ರ ಸೂಚನೆ

Update: 2019-11-07 16:27 GMT

  ಹೊಸದಿಲ್ಲಿ,ನ.7: ರಾಮಜನ್ಮಭೂಮಿ-ಬಾಬರಿ ಮಸೀದಿ ಭೂವಿವಾದಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್ ಕೆಲವೇ ದಿನಗಳೊಳಗೆ ತೀರ್ಪು ನೀಡಲಿರುವ ಹಿನ್ನೆಲೆಯಲ್ಲಿ ಕಟ್ಟೆಚ್ಚರದಿಂದ ಇರುವಂತೆ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗು ಭದ್ರತೆಯನ್ನು ಖಾತರಿಪಡಿಸುವಂತೆ ಕೇಂದ್ರ ಸರಕಾರವು ಎಲ್ಲಾ ರಾಜ್ಯಗಳಿಗೆ ಗುರುವಾರ ಸೂಚನೆ ನೀಡಿದೆ.

   ಕಾನೂನು ಮತ್ತು ಶಿಸ್ತನ್ನು ಕಾಪಾಡಲು ಕೇಂದ್ರ ಗೃಹ ಸಚಿವಾಲಯವು ವಿಶೇಷವಾಗಿ ಅಯೋಧ್ಯೆ ಸೇರಿದಂತೆ ಉತ್ತರಪ್ರದೇಶಕ್ಕೆ ಸುಮಾರು 4 ಸಾವಿರ ಅರೆಸೈನಿಕ ಸಿಬ್ಬಂದಿಯನ್ನು ರವಾನಿಸಿದೆ.

    ದೇಶದ ಯಾವುದೇ ಭಾಗದಲ್ಲಿ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಎಲ್ಲಾ ಸೂಕ್ಷ್ಮ ಸಂವೇದಿ ಸ್ಥಳಗಳಲ್ಲಿ ಭದ್ರತಾ ಸಿಬ್ಬಂದಿಯನ್ನು ಸಮರ್ಪಕವಾಗಿ ನಿಯೋಜಿಸುವಂತೆ ಎಲ್ಲಾ ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸಾಮಾನ್ಯ ಸಲಹೆ ಸುತ್ತೋಲೆಯನ್ನು ಕಳುಹಿಸಲಾಗಿದೆ ಎಂದು ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾಎ.

 ಕಾನೂನು ಮತ್ತು ಶಿಸ್ತು ಪಾಲನೆ ಕಾರ್ಯಗಳಿಗಾಗಿ ಉತ್ತರಪ್ರದೇಶ ಸರಕಾರಕ್ಕೆ ಸಹಕರಿಸಲು ಅರೆಸೈನಿಕ ಪಡೆಗಳ 40 ತುಕಡಿಗಳನ್ನು ಸಚಿವಾಲಯವು ರವಾನಿಸಿದೆಯಂದು ಮೂಲಗಳು ತಿಳಿಸಿವೆ.

ನವೆಂಬರ್ ತಿಂಗಳ 17ಕ್ಕೆ ಮುನ್ನ ರಾಮಜನ್ಮಭೂಮಿ-ಬಾಬರಿ ಮಸೀದಿ ಭೂ ಒಡೆತನದ ಕುರಿತ ಸುಪ್ರೀಂಕೋರ್ಟ್ ತೀರ್ಪು ನಿರೀಕ್ಷಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News