ಮನಪಾ ಚುನಾವಣೆ: ಮದ್ಯ ನಿಷೇಧ

Update: 2019-11-07 17:19 GMT

ಮಂಗಳೂರು, ನ.7: ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ-2019ಕ್ಕೆ ಸಂಬಂಧಿಸಿದಂತೆ ನ.12ರಂದು ಮತದಾನ ಹಾಗೂ ನ.14ರಂದು ಮತ ಎಣಿಕೆ ನಡೆಯಲಿದೆ. ಶಾಂತಿ ಕಾಪಾಡುವ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಗೊಳಿಸಿ ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ಆದೇಶ ಹೊರಡಿಸಿದ್ದಾರೆ.

ಮಂಗಳೂರು ನಗರದಲ್ಲಿ ಮತದಾನವು ಮುಕ್ತ ಹಾಗೂ ನ್ಯಾಯ ಸಮ್ಮತ ನಿಷ್ಪಕ್ಷಪಾತದಿಂದ ಕೂಡಿದ ಶಾಂತಿಯುತ ವಾತಾವರಣದಲ್ಲಿ ನಡೆಯುವುದನ್ನು ಖಾತರಿಪಡಿಸುವ ದೃಷ್ಟಿಯಿಂದ ಮಂಗಳೂರು ನಗರದಾದ್ಯಂತ ಮತದಾನದ ಸಲುವಾಗಿ ನ.10ರಂದು ಸಂಜೆ 5ರಿಂದ ನ.12 ರ ಮಧ್ಯರಾತ್ರಿಯವರೆಗೆ ಹಾಗೂ ಮತ ಎಣಿಕೆಯ ಸಲುವಾಗಿ ನ.13ರ ಸಂಜೆ 5ರಿಂದ ನ.14 ರಂದು ಮಧ್ಯರಾತ್ರಿಯವರೆಗೆ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ.

ಮತ ಎಣಿಕೆ ನಡೆಯುವ ಪ್ರದೇಶದ 5 ಕಿ.ಮೀ. ವ್ಯಾಪ್ತಿಯನ್ನು ಮದ್ಯ ಮುಕ್ತ ದಿನವೆಂದು (ಡ್ರೈ ಡೇಸ್) ಘೋಷಿಸಲಾಗುವುದು. ಈ ದಿನಗಳಲ್ಲಿ ಎಲ್ಲ ವಿಧದ ಮದ್ಯದಂಗಡಿಗಳನ್ನು ಮತ್ತು ಇನ್ನುಳಿದ ಯಾವುದೇ ವಿಧದ ಮದ್ಯ ಮಾರಾಟದ ಪರಾವಾನಿಗೆ ಇರುವಂತಹ ಅಂಗಡಿಗಳನ್ನು ಹಾಗೂ ಮಾರಾಟ ಕೇಂದ್ರ ಹಾಗೂ ನಗರದಾದ್ಯಂತ ಯಾವುದೇ ಹೋಟೆಲ್‌ಗಳಲ್ಲಾಗಲಿ, ನಾನ್ ಪ್ರೊಪ್ರೈಟರಿ ಕ್ಲಬ್, ಸ್ಟಾರ್ ಹೋಟೆಲ್, ಕ್ಲಬ್‌ಗಳಲ್ಲಿ ಮದ್ಯ ಮಾರಾಟ ಅಥವಾ ಸರಬರಾಜು ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ಆದೇಶಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News