ಮಂಗಳೂರು: ಕಾಂಗ್ರೆಸ್‌ನಿಂದ ತೌಫೀಕ್ ಉಚ್ಚಾಟನೆ

Update: 2019-11-07 17:20 GMT

ಮಂಗಳೂರು, ನ.7: ಮಂಗಳೂರು ಮಹಾನಗರ ಪಾಲಿಕೆಯ 47ನೇ ವಾರ್ಡ್ (ಮಿಲಾಗ್ರಿಸ್) ನಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಬ್ದುಲ್ ರವೂಫ್ ಸ್ಪರ್ಧಿಸುತ್ತಿದ್ದಾರೆ. ಇವರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ತೌಫೀಕ್ ಟಿ.ಕೆ. ಅವರನ್ನು ಮುಂದಿನ ಆರು ವರ್ಷಗಳ ಅವಧಿಗೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಉಚ್ಛಾಟಿಸಿದ್ದಾರೆ.

ಪಾಲಿಕೆಗೆ ನ.12ರಂದು ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಸ್ಪರ್ಧಿಸಿದ್ದ ಹಿನ್ನೆಲೆಯಲ್ಲಿ ತೌಫೀಕ್ ಟಿ.ಕೆ. ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಂತೋಷ್‌ ಕುಮಾರ್ ಶೆಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News