ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಪ್ರವಾಸಕ್ಕೆ ಅವಕಾಶ: ಸಚಿವ ಸಿ.ಟಿ.ರವಿ

Update: 2019-11-07 17:55 GMT

ಯಾದಗಿರಿ, ನ.6: ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲ ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೂ ಕರ್ನಾಟಕ ದರ್ಶನ ಯೋಜನೆಯ ಅಡಿಯಲ್ಲಿ ಪ್ರವಾಸಕ್ಕೆ ಅವಕಾಶ ಮಾಡಿಕೊಡಲು ಸರಕಾರ ಚಿಂತನೆ ನಡೆಸುತ್ತಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದ್ದಾರೆ.

ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಈ ಹಿಂದೆ ಶೈಕ್ಷಣಿಕ ಪ್ರವಾಸಕ್ಕೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು ಅಷ್ಟೇ ಆಯ್ಕೆ ಮಾಡಲಾಗುತ್ತಿದೆ. ಹೀಗಾಗಿ, ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಲರನ್ನು ಕಳಿಸಿಕೊಡಲಾಗುವುದು ಎಂದು ತಿಳಿಸಿದರು.

ಮಕ್ಕಳಲ್ಲಿ ಜಾತಿ ತಾರತಮ್ಯ ತಲೆಯಲ್ಲಿ ಸೇರದಿರಲಿ ಎಂಬ ಕಾರಣದಿಂದಾಗಿ ಮುಂದಿನ ಬಜೆಟ್‌ನಲ್ಲಿ ಇದಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ಘೋಷಣೆ ಮಾಡಲಿದ್ದಾರೆ. ರಾಜ್ಯದಲ್ಲಿ 3 ವಿಶ್ವದರ್ಜೆ ಪಾರಂಪರಿಕ ತಾಣಗಳಿದ್ದು, 30 ಕ್ಕೂ ಅಧಿಕ ವನ್ಯಜೀವಿ, 40 ಜಲಪಾತ, 15 ಗಿರಿ ಶ್ರೇಣಿಗಳು, 1500 ಕ್ಕೂ ಅಧಿಕ ಐತಿಹಾಸಿಕ ಸ್ಥಳಗಳಿವೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News