ಬಂಟ್ವಾಳ: ಬಹುಗ್ರಾಮ ಶುದ್ಧ ಕುಡಿಯುವ ನೀರಿನ ಯೋಜನೆ ಉದ್ಘಾಟನೆ

Update: 2019-11-08 10:35 GMT

ಬಂಟ್ವಾಳ : ದ.ಕ. ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮಂಗಳೂರು ವಿಭಾಗ ಸಹಯೋಗದೊಂದಿಗೆ ಮಾಣಿ ಮತ್ತು 51 ಜನವಸತಿಗಳ ಬಹುಗ್ರಾಮ ಶುದ್ಧ ಕುಡಿಯುವ ನೀರಿನ ಯೋಜನೆಯ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ಮಧ್ಯಾಹ್ನ ನಡೆಯಿತು.

ಪೆರಾಜೆ ಗ್ರಾಪಂ ಗಡಿಯಾರದಲ್ಲಿರುವ ನೀರು ಶುದ್ದೀಕರಣ ಘಟಕವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಉದ್ಘಾಟಿಸಿದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ, ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಬಂಟ್ವಾಳ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಮಾಣಿ ಗ್ರಾಪಂ ಮಮತಾ ಎಸ್.ಶೆಟ್ಟಿ, ಜಿಪಂ ಸದಸ್ಯೆ ಕಮಲಾಕ್ಷಿ ಪೂಜಾರಿ, ಇಂಜಿನಿಯರ್ ನರೇಂದ್ರ ಬಾಬು, ಜಿಪಂ, ತಾಪಂ, ಗ್ರಾಪಂನ ಸದಸ್ಯರು ಭಾಗವಹಿಸಿದ್ದರು.
ಜನಪ್ರತಿನಿಧಿಗಳು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News