ರಾಜ್ಯದ 15 ಜಿಲ್ಲೆಗಳ 55 ತಾಲೂಕುಗಳು 'ಪ್ರವಾಹ ಪೀಡಿತ'

Update: 2019-11-08 11:54 GMT

ಬೆಂಗಳೂರು, ನ. 8: ಪ್ರಸಕ್ತ ಸಾಲಿನಲ್ಲಿ ರಾಜ್ಯದ ಮುಂಗಾರು ಋತುವಿನಲ್ಲಿ ಅಕ್ಟೋಬರ್‌ನಲ್ಲಿ ಸುರಿದ ಮಳೆ ಹಾಗೂ ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ರಾಜ್ಯದ 15 ಜಿಲ್ಲೆಗಳ 55 ತಾಲೂಕುಗಳನ್ನು ಪ್ರವಾಹ ಪೀಡಿತ ಪ್ರದೇಶಗಳು ಎಂದು ರಾಜ್ಯ ಸರಕಾರ ಘೋಷಿಸಿದೆ.

ಬೆಂ.ನಗರ ಜಿಲ್ಲೆಯ ಬೆಂ.ದಕ್ಷಿಣ, ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಮತ್ತು ಗುಬ್ಬಿ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಮತ್ತು ಹೊಸದುರ್ಗ, ದಾವಣಗೆರೆ ಜಿಲ್ಲೆಯ ಚನ್ನಗಿರಿ, ದಾವಣಗೆರೆ, ಹೊನ್ನಾಳಿ, ಬಳ್ಳಾರಿ ಜಿಲ್ಲೆಯ ಹಡಗಲಿ, ಹಗರಿಬೊಮ್ಮನಹಳ್ಳಿ ಮತ್ತು ಹರಪ್ಪನಹಳ್ಳಿ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ, ಗೋಕಾಕ್ ಮತ್ತು ಖಾನಾಪುರ, ಬಾಗಲಕೋಟೆ ಜಿಲ್ಲೆ ಮುಧೋಳ, ಹಾವೇರಿ ಜಿಲ್ಲೆಯ ಬ್ಯಾಡಗಿ, ಹಾವೇರಿ, ಹಿರೇಕೆರೂರು, ರಾಣಿಬೆನ್ನೂರು ಮತ್ತು ಶಿಗ್ಗಾಂವ, ಧಾರವಾಡ ಜಿಲ್ಲೆಯ ಧಾರವಾಡ, ಹುಬ್ಬಳ್ಳಿ, ಕಲಘಟಗಿ ಮತ್ತು ಕುಂದಗೋಳ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ, ಹೊಸನಗರ, ಸಾಗರ, ಶಿಕಾರಿಪುರ, ಶಿವಮೊಗ್ಗ ಮತ್ತು ಸೊರಬ, ಚಿಕ್ಕಮಗಳೂರು ಜಿಲ್ಲೆಯ ಕಡೂರು, ಕೊಪ್ಪ, ಮೂಡಿಗೆರೆ, ನರಸಿಂಹರಾಜಪುರ, ಶೃಂಗೇರಿ ಮತ್ತು ತರೀಕೆರೆ, ಕೊಡಗು ಜಿಲ್ಲೆಯ ಮಡಿಕೇರಿ ಮತ್ತು ಸೋಮವಾರಪೇಟೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಬಂಟ್ವಾಳ, ಮಂಗಳೂರು ಮತ್ತು ಪುತ್ತೂರು. ಉಡುಪಿ ಜಿಲ್ಲೆಯ ಕಾರ್ಕಳ, ಕುಂದಾಪುರ ಮತ್ತು ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಅಂಕೋಲ, ಭಟ್ಕಳ, ಹಳಿಯಾಳ, ಹೊನ್ನಾವರ, ಕಾರವಾರ, ಕುಮಟ, ಸಿದ್ದಾಪುರ, ಶಿರಸಿ, ಜೊಯಿಡಾ ಮತ್ತು ಯಲ್ಲಾಪುರ ತಾಲೂಕುಗಳನ್ನು ಪ್ರವಾಹ ಪೀಡಿತ ಪ್ರದೇಶಗಳು ಎಂದು ಘೋಷಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News