ಮುಖ್ಯಮಂತ್ರಿ ಯಡಿಯೂರಪ್ಪರನ್ನು ಭೇಟಿ ಮಾಡಿದ ಜಪಾನ್ ನಿಯೋಗ

Update: 2019-11-08 14:05 GMT

ಬೆಂಗಳೂರು, ನ. 8: ಜಪಾನಿನ ಮಾಜಿ ರಾಯಭಾರಿ ಹಿರಾಬಯಾಶಿ ಹಾಗೂ ಜಪಾನಿನ ಕೌನ್ಸಲ್ ಜನರಲ್ ಟಕಯುಕಿ ಕಿಟಗಾವ ಅವರ ನೇತೃತ್ವದ ನಿಯೋಗವು ಶುಕ್ರವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಕೈಗಾರಿಕೊದ್ಯಮ ಕ್ಷೇತ್ರದ ಬಗ್ಗೆ ಸಮಾಲೋಚನೆ ನಡೆಸಿತು.

ಕರ್ನಾಟಕದಲ್ಲಿ ಕೈಗಾರಿಕೋದ್ಯಮಕ್ಕೆ ಇರುವ ವಿಫುಲ ಅವಕಾಶಗಳ ಬಗ್ಗೆ ಶ್ಲಾಘಿಸಿದ ನಿಯೋಗದ ಪ್ರತಿನಿಧಿಗಳು, ಕರ್ನಾಟಕ ರಾಜ್ಯದಲ್ಲಿ ಜಪಾನಿಸ್ ಟೌನ್‌ಶಿಪ್ ನಿರ್ಮಾಣವಾಗಿದ್ದು, ಜಪಾನ್ ಮೂಲಕ ಸಾಕಷ್ಟು ಕಂಪೆನಿಗಳು ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಲು ಆಸಕ್ತಿ ತೋರುತ್ತಿವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ, ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್, ವಾಣಿಜ್ಯ ಮತ್ತು ಕೈಗಾರಿಕೋದ್ಯಮ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್‌ ಗುಪ್ತ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News