ಟಿಪ್ಪು ಜಯಂತಿ ಆಚರಣೆಗೆ ಸ್ಥಳ ನಿರಾಕರಣೆ: ಮೈಸೂರು ಜಿಲ್ಲಾಧಿಕಾರಿಗೆ ಹೈಕೋರ್ಟ್ ನೋಟಿಸ್

Update: 2019-11-08 14:41 GMT

ಬೆಂಗಳೂರು, ನ.8: ಮೈಸೂರಿನಲ್ಲಿ ಟಿಪ್ಪು ಜಯಂತಿ ಆಚರಣೆಗೆ ಬಾಲಭವನದ ಸಭಾಂಗಣವನ್ನು ಬಾಡಿಗೆ ನೀಡದಿರುವುದನ್ನು ಪ್ರಶ್ನಿಸಿ ಮಾಜಿ ಸಚಿವ ತನ್ವೀರ್ ಸೇಠ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಮೈಸೂರು ಜಿಲ್ಲಾಧಿಕಾರಿ, ಮೂಡಾ ಅಧ್ಯಕ್ಷರಿಗೆ ನೋಟಿಸ್ ಜಾರಿಗೊಳಿಸಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನಿಲ್ ದತ್ತ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ. 

ಮೂಡಾ ಪರ ವಾದಿಸಿದ ವಕೀಲರು, ನಾವು ಟಿಪ್ಪು ಜಯಂತಿ ಆಚರಣೆಗೆ ಯಾವುದೇ ನಿರ್ಬಂಧ ಹೇರಿಲ್ಲ. ಬನ್ನಿ ಮಂಟಪದ ಬಳಿ ಇರುವ ಬಾಲಭವನ ಚಾಮುಂಡೇಶ್ವರಿ ಮೆರವಣಿಗೆ ಮಾಡುವ ಜಾಗವಾಗಿದೆ. ಹೀಗಾಗಿ, ಈ ಸ್ಥಳದಲ್ಲಿ ಟಿಪ್ಪು ಜಯಂತಿಗೆ ಅವಕಾಶ ನೀಡಿಲ್ಲ ಎಂದು ಪೀಠಕ್ಕೆ ತಿಳಿಸಿದರು.

ಅರ್ಜಿದಾರರ ಪರ ವಾದಿಸಿದ ವಕೀಲರು, ನಾವು ನ.10ರಂದೆ ಟಿಪ್ಪು ಜಯಂತಿ ಆಚರಿಸಬೇಕೆಂದು ಬಯಸಿಲ್ಲ. ಬಾಲಭವನದಲ್ಲಿ ಅವಕಾಶ ಮಾಡಿಕೊಟ್ಟರೆ ಮುಂದಿನ ವಾರದಲ್ಲಿ ಆಚರಣೆ ಮಾಡುತ್ತೇವೆ ಎಂದು ಪೀಠಕ್ಕೆ ತಿಳಿಸಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಅರ್ಜಿದಾರರ ಮನವಿಯನ್ನು ಪುನರ್ ಪರಿಶೀಲಿಸಲು ಆಗುವುದಿಲ್ಲವೇ ಎಂದು ಪ್ರಶ್ನಿಸಿ, ಮೈಸೂರು ಡಿಸಿಗೆ ಹಾಗೂ ಮೂಡಾ ಅಧ್ಯಕ್ಷರಿಗೆ ನೋಟಿಸ್ ಜಾರಿಗೊಳಿಸಿತು.

ಖಾಸಗಿಯಾಗಿ ಟಿಪ್ಪು ಜಯಂತಿ ಆಚರಿಸಲು ಯಾವುದೇ ನಿರ್ಬಂಧವಿಲ್ಲ. ಸರಕಾರ ಕೂಡ ರಕ್ಷಣೆ ನೀಡಬೇಕೆಂದು ಹೈಕೋರ್ಟ್ ಆದೇಶಿಸಿದ ಬೆನ್ನಲ್ಲೇ ಜಯಂತಿ ಆಚರಣೆಗೆ ಮೂಡಾದವರು ನಿರಾಕರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News