ಕನಕ ಜಯಂತಿ ಸರಳ ಆಚರಣೆ: ಸದಾಶಿವ ಪ್ರಭು

Update: 2019-11-08 15:53 GMT

ಉಡುಪಿ, ನ.8: ಅತಿವೃಷ್ಠಿಯಿಂದಾಗಿ ರಾಜ್ಯದಾದ್ಯಂತ ಸಾಕಷ್ಟು ಹಾನಿ ಸಂಭವಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಕನಕ ಜಯಂತಿಯನ್ನು ಸರಳವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹೇಳಿದ್ದಾರೆ.

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕನಕ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನ.15ರಂದು ಸರಕಾರದ ಆದೇಶದಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಗೆ ಸರಳವಾಗಿ ಕನಕ ಜಯಂತಿಯನ್ನು ಆಚರಿಸಲಾಗು ತ್ತಿದೆ. ನಿವೃತ್ತ ಪಾಂಶುಪಾಲ ಮೇಟಿ ಮುದಿಯಪ್ಪ ಕನಕದಾಸರ ಜೀವನದ ಕುರಿತು ಉಪನಾ್ಯಸ ನೀಡಲಿ ದ್ದಾರೆ ಎಂದು ತಿಳಿಸಿದರು.

ಉತ್ತರ ಕನ್ನಡ ಹಾಗೂ ಕರಾವಳಿಯ ಅನೇಕ ಭಾಗಗಳಲ್ಲಿ ಅತಿವೃಷ್ಠಿಯಿಂದಾಗಿ ಜೀವಹಾನಿ ಸಂಭವಿಸಿದ್ದು, ಅನೇಕರು ನೆಲೆ ಕಳೆದು ಕೊಂಡಿದ್ದಾರೆ. ಹಾಗೂ ಅಯೋಧ್ಯೆ ತೀರ್ಪಿನ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಕನಕ ಜಯಂತಿಯನ್ನು ಸರಳವಾಗಿ ಆಚರಿಸುವುದು ಸೂಕ್ತ ಎಂದು ಹೇಳಿದರು.

ಮೇಟಿ ಮುದಿಯಪ್ಪ ಅವರು ಮಾತನಾಡಿ, ಪ್ರತೀ ವರ್ಷ ಕನಕ ಜಯಂತಿ ಯನ್ನು ಜಿಲ್ಲೆಯ ಗೋವಿಂದ ಕಲ್ಯಾಣ ಮಂಟಪದಲ್ಲಿ ಆಚರಿಸಲಾಗು ತ್ತಿದ್ದು, ಈ ಬಾರಿ ನೆರೆ ಹಾವಳಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸರವಾಗಿ ಆಚರಿಸಲಾಗುತ್ತದೆ ಎಂದರು.

ಉಡುಪಿ ಜಿಲ್ಲಾ ಶ್ರೀಕನಕದಾಸ ಸಮಾಜ ಸೇವಾ ಸಂಘ ವತಿಯಿಂದ ಜಗದ್ಗುರು ಶ್ರೀ ಕನಕದಾಸರ 532ನೇ ಜಯಂತಿಯನ್ನು ನ.15ರಂದು ಗೋವಿಂದ ಕಲ್ಯಾಣ ಮಂಟಪದಲ್ಲೂ ನಡೆಸಲು ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಯಿತು. ಕಾರ್ಯಕ್ರಮಕ್ಕೆ ಪೊಲೀಸ್ ಹಾಗೂ ಜಿಲ್ಲಾಡಳಿತದಿಂದ ಅನುಮತಿ ಪಡೆಯುವಂತೆ ಕನಕ ಸಮಾಜದ ಪದಾಧಿಕಾರಿಳಿಗೆ ಅಪರ ಜಿಲ್ಲಾಧಿಕಾರಿ ಸೂಚಿಸಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪೂರ್ಣಿಮಾ, ಕನಕ ಸಮಾಜದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News