ಉಡುಪಿ: ಪೊಲೀಸರಿಗೆ ಆರೋಗ್ಯ ಸುರಕ್ಷಾ ಕಾರ್ಡ್ ವಿತರಣೆ

Update: 2019-11-08 16:18 GMT

ಉಡುಪಿ, ನ.8: ಜಿ.ಶಂಕರ್ ಪ್ಯಾಮಿಲಿ ಟ್ರಸ್ಟ್ ಉಡುಪಿ ಹಾಗೂ ಮಣಿಪಾಲ ಕೆಎಂಸಿ ಸಹಭಾಗಿತ್ವದಲ್ಲಿ ಉಡುಪಿ ಪೊಲೀಸ್ ಇಲಾಖೆಯ ಸುಮಾರು ಒಂದು ಸಾವಿರ ಮಂದಿಗೆ ಇಂದು ಮಣಿಪಾಲ ಆರೋಗ್ಯ ಸುರಕ್ಷಾ ಯೋಜನೆು ಕಾರ್ಡುಗಳನ್ನು ವಿತರಿಸಲಾಯಿತು.

2014ರಿಂದ ಸತತವಾಗಿ ಪೊಲೀಸರಿಗೆ ಉಚಿತವಾಗಿ ಮಣಿಪಾಲ ಆರೋಗ್ಯ ಸುರಕ್ಷಾ ಯೋಜನೆಯ ಕಾರ್ಡಗಳನ್ನು ವಿತರಿಸಲಾಗುತ್ತಿದೆ. ಪ್ರಸ್ತುತ ಸೇವೆಯಲ್ಲಿ ರುವ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳ ಪರವಾಗಿ ಉಡುಪಿ ಜಿಲ್ಲೆಯ ಪೊಲೀಸ್ ಅಧೀಕ್ಷಕರು ಹಾಗೂ ನಿವೃತ್ತ ಪೊಲೀಸ್ ಸಿಬ್ಬಂದಿಗಳ ಪರವಾಗಿ ನಿವೃತ್ತ ಪೊಲೀಸ್ ಉಪಾಧೀಕ್ಷಕರಾದ ಡಾ.ಪ್ರಭುದೇವ ಮಾನೆ ಇವರಿಗೆ ಡಾ. ಜಿ.ಶಂಕರ್ ಪ್ಯಾಮಿಲಿ ಟ್ರಸ್ಟ್‌ನ ಡಾ.ಜಿ.ಶಂಕರ್ ಕಾರ್ಡುಗಳನ್ನು ಪಡೆದರು.

ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ, ಪೊಲೀಸ್ ಉಪಾಧೀಕ್ಷಕ ಜೈಶಂಕರ್, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಮೊಗವೀರ ಸಂಘಟನೆಯ ಮಹಾಸಭಾ ಉಚ್ಚಿಲ ಸಂಘದ ಅಧ್ಯಕ್ಷ ಜಯ ಕೋಟ್ಯಾನ್, ಮೊಗವೀರ ಯುವ ಸಂಘಟನೆಯ ಅಧ್ಯಕ್ಷ ವಿನಯ ಕರ್ಕೇರ, ಉಪಸ್ಥಿತರಿದ್ದರು.

ನಿಸ್ತಂತು ಪಿಎಸ್‌ಐ ಮನಮೋಹನ್ ರಾವ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News