ಉಡುಪಿ ಜಿಲ್ಲಾದ್ಯಂತ ನಾಳೆ ಬೆಳಗ್ಗೆಯ ವರೆಗೆ ನಿಷೇಧಾಜ್ಞೆ
Update: 2019-11-09 13:24 IST
ಉಡುಪಿ, ನ.9: ಅಯೋಧ್ಯೆ ವಿವಾದದ ತೀರ್ಪಿನ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲಾದ್ಯಂತ ಇಂದು(ನ.9) ಬೆಳಗ್ಗೆ 10 ಗಂಟೆಯಿಂದ ನ.11ರ ಬೆಳಗ್ಗೆ 6 ಗಂಟೆಯ ವರೆಗೆ ಉಡುಪಿ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ.
ಇದೇವೇಳೆ ಇಂದು ಬೆಳಗ್ಗೆ 6 ಗಂಟೆಯಿಂದ ನ.11ರ ಬೆಳಗ್ಗೆ 6 ಗಂಟೆಯ ವರೆಗೆ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಈ ಅವಧಿಯಲ್ಲಿ ಜಿಲ್ಲೆಯ ಬಾರ್ ಆ್ಯಂಡ್ ರೆಸ್ಟೋರೆಂಟ್, ವೈನ್ ಶಾಪ್ ಹಾಗೂ ಅಬಕಾರಿ ಸನ್ನದುಗಳನ್ನು ಮುಚ್ಚುವಂತೆ ಅವರು ಆದೇಶದಲ್ಲಿ ಸೂಚಿಸಿದ್ದಾರೆ.